LATEST NEWS
ಉಡುಪಿ ಜಿಲ್ಲಾ ರಜತ ಮಹೋತ್ಸವ ಕಾರ್ಯಕ್ರಮದ ಲಾಂಛನ ಹಾಗೂ ವೆಬ್ ಸೈಟ್ ಬಿಡುಗಡೆ

ಉಡುಪಿ ಅಗಸ್ಟ್ 23: ಉಡುಪಿ ಜಿಲ್ಲಾ ರಜತ ಮಹೋತ್ಸವ ಕಾರ್ಯಕ್ರಮದ ಲಾಂಛನ ಹಾಗೂ ವೆಬ್ ಸೈಟ್ ನ್ನು ಬಿಡುಗಡೆಗೊಳಿಸಲಾಯಿತು.ರಜತ ಮಹೋತ್ಸವದ ಲೋಗೋವನ್ನು ಉಡುಪಿ ಶಾಸಕರಾದ ರಘುಪತಿ ಭಟ್ ಬಿಡುಗಡೆಗೊಳಿಸಿದರು. ಕಾಫು ಶಾಸಕ ಲಾಲಾಜಿ ಮೆಂಡನ್ ಇದೇ ಸಂಧರ್ಭದಲ್ಲಿ ರಜತ ಮಹೋತ್ಸವದ ವೆಬ್ ಸೈಟ್ ಅನ್ನು ಅನಾವರಣಗೊಳಿಸಿದರು.
ಆಗಸ್ಟ್ 25 ರಿಂದ ಜನವರಿ 25 ರ ವರೆಗೆ ಉಡುಪಿ ಜಿಲ್ಲೆಯ ರಜತಮಹೋತ್ಸವವು ನಡೆಯಲಿದೆ. ಲೋಗೋ ಬಿಡುಗಡೆ ಗೊಳಿಸಿ ಮಾತನಾಡಿದ ಶಾಸಕ ರಘುಪತಿ ಭಟ್, ರಜತ ಮಹೋತ್ಸವದ ಸಂಧರ್ಭದಲ್ಲಿ ಸೈನ್ಯಕ್ಕೆ ಹೆಚ್ಚಿನ ಯುವಕರನ್ನು ಆಕರ್ಷಿಸುವ ನಿಟ್ಟಿನಲ್ಲಿ 75 ಕಿಲೋ ಮೀಟರ್ ಅಗ್ನಿಪಥ್ ರ್ಯಾಲಿ ನಡೆಯಲಿದೆ. ಸುಮಾರು 500 ವಿದ್ಯಾರ್ಥಿಗಳು ಇದರಲ್ಲಿ ಸಂಪೂರ್ಣವಾಗಿ ಭಾಗವಹಿಸಲಿದ್ದಾರೆ.

ಆಗಸ್ಟ್ 25 ರಂದು 3 ಗಂಟೆಗೆ ಉಡುಪಿ ಬೋರ್ಡ್ ಹೈಸ್ಕೂಲ್ ನಿಂದ ಅಜ್ಜರಕಾಡು ಮೈದಾನದವರೆಗೆ ಬೃಜಹತ್ ಶೋಭಾಯಾತ್ರೆ ನಡೆಯಲಿದೆ. ಇದರಲ್ಲಿ ಸುಮಾರು 5 ರಿಂಸ 6 ಸಾವಿರ ಕಾಲೇಜು ವಿದ್ಯಾರ್ಥಿಗಳು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಪ್ರತಿ ಪಂಚಾಯತ್ ನಿಂದ ಕಳೆದ 25 ವರ್ಷಗಳಲ್ಲಿ ಸೇವೆ ಸಲ್ಲಿರುವ ಜನಪ್ರತಿನಿಧಿಗಳು, ಸ್ಥಳೀಯ ಸಂಸ‍್ಥೆಗಳ ಪ್ರತಿನಿಧಿಗಳು, ಬಾಗವಹಿಸಲಿದ್ದಾರೆ. ಕಾರ್ಯಕ್ರಮವನ್ನು ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟಿಸಲಿದ್ದಾರೆ ಎಂದರು.