LATEST NEWS
ಉಡುಪಿ – ಶಾಂತಿಯುತ ಹೋರಾಟ ಮಾಡುತ್ತಿದ್ದೇವೆ..ಹೋರಾಟಕ್ಕೆ ಕಿಚ್ಚು ಹಚ್ಚಿದ್ರೆ ಲಕ್ಷ ಕೋಟಿ ಜನ ಸೇರುತ್ತವೆ..!

ಉಡುಪಿ, ಅಗಸ್ಟ್ 30 : ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆ ಇದೀಗ ಗೊಂದಲಗಳಿಗೆ ಕಾರಣವಾಗಲು ಪ್ರಾರಂಭವಾಗಿದ್ದು, ಧರ್ಮಸ್ಥಳ ಪರ ನಿನ್ನೆ ಉಡುಪಿಯಲ್ಲಿ ನಡೆದ ಪ್ರತಿಭಟನೆ ಸಂದರ್ಭ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣ ವಾಗಿದ್ದು, ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.
ಸೌಜನ್ಯಾ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಆರೋಪಿಗಳಿಗೆ ಉಗ್ರ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿ ‘ಸೌಜನ್ಯಾ ಹೋರಾಟ ಸಮಿತಿ’ ವತಿಯಿಂದ ಮಂಗಳವಾರ ಇಲ್ಲಿಯ ಅಜ್ಜರಕಾಡು ಹುತಾತ್ಮ ಸ್ಮಾರಕದ ಎದುರು ಪ್ರತಿಭಟನೆ ನಡೆಸಿದರು. ಈ ವೇಳೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೂರಾರು ಕಾರ್ಯಕರ್ತೆಯರು ಪ್ರತಿಭಟನಾ ಸ್ಥಳದಲ್ಲಿ ನೆರೆದಿದ್ದರಿಂದ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಕೂಡಲೇ ಪೊಲೀಸರು ಕಾರ್ಯಕರ್ತೆಯರನ್ನು ಚದುರಿಸಿ ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದರು.

ಈ ಸಂದರ್ಭ ಮಾತನಾಡಿದ ಮಹೇಶ್ ಶೆಟ್ಟಿ ತಿಮರೋಡಿ ನಮ್ಮ ಹೋರಾಟ ಶಾಂತಾ ರೀತಿಯಲ್ಲಿ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಲಕ್ಷ ಕೋಟಿ ಮಂದಿ ಬೀದಿಗೆ ಇಳಿದು ಹೋರಾಟ ನಡೆಸಲಿದ್ದೇವೆ. ಇದು ಪ್ರಧಾನ ಮಂತ್ರಿ, ಮುಖ್ಯಮಂತ್ರಿ, ಗೃಹಸಚಿವರು, ಎಲ್ಲ ಇಲಾಖಾಧಿಕಾರಿಗಳಿಗೆ ನೀಡುತ್ತಿ ರುವ ಎಚ್ಚರಿಕೆಯಾಗಿದೆ. ಆದುದರಿಂದ ಪ್ರಕರಣದ ಮರುತನಿಖೆಗೆ ನಡೆಸಿ ಆರೋಪಿಗಳನ್ನು ಶಿಕ್ಷೆಗೆ ಗುರಿಪಡಿಸಬೇಕೆಂದು ಅವರು ಒತ್ತಾಯಿಸಿದರು.