Connect with us

LATEST NEWS

ರಾಜಕೀಯ ಬಣ್ಣ ಪಡೆಯುತ್ತಿರುವ ಉಡುಪಿ ಟಾಯ್ಲೆಟ್ ಕ್ಯಾಮರಾ ಪ್ರಕರಣ…!!

Share Information

ಉಡುಪಿ ಜುಲೈ 25 : ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನ ವಾಶ್ ರೂಂ ನಲ್ಲಿ ಮುಸ್ಲಿಂ ವಿಧ್ಯಾರ್ಥಿನಿಯರು ಹಿಂದೂ ವಿಧ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣ ಇದೀಗ ರಾಜಕೀಯ ಬಣ್ಣ ಪಡೆಯಲು ಆರಂಭಿಸಿದ್ದು, ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್ ಆಗಲಾರಂಭಿಸಿದೆ. ಈ ಪ್ರಕರಣದಲ್ಲಿ ಆರೋಪಿಗಳಾದ ಮೂವರು ವಿದ್ಯಾರ್ಥಿನಿಯರು ಅನ್ಯಕೋಮಿನವರು ಆಗಿರುವುದರಿಂದ ಈ ಘಟನೆಯ ಸದ್ಯ ಹಾಟ್ ಟಾಪಿಕ್ ಆಗುವತ್ತ ಹೊರಟಿದೆ.


ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಕಾಲೇಜು ಆಡಳಿತ ಮಂಡಳಿ ಮೂವರು ವಿಧ್ಯಾರ್ಥಿನಿಯರನ್ನು ಸಸ್ಪೆಂಡ್ ಮಾಡಿದೆ. ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಗೂ ಮಾಹಿತಿಯನ್ನು ನೀಡಿದೆ. ಈ ನಡುವೆ ಹಿಂದೂ ಪರ ಸಂಘಟನೆಗಳು ಈ ವಿಚಾರದಲ್ಲಿ ಗರಂ ಆಗಿದ್ದು, ರಾಜ್ಯ ಸರಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ


2021ರಲ್ಲಿ ಇಂಗ್ಲೆಂಡಿನ ಪ್ರತಿಷ್ಠಿತ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಓದುತ್ತಿದ್ದಾಗ, ಅಲ್ಲಿನ ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದ ರಶ್ಮಿ ಸಾಮಂತ್ ಅವರೂ ಸಹ ಉಡುಪಿ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿದ್ದಾರೆ. “ನಾನು ಸಹ ಉಡುಪಿಯವಳೇ. ಉಡುಪಿಯಲ್ಲಾಗಿರುವ ಸ್ನಾನದ ದೃಶ್ಯಗಳ ಚಿತ್ರೀಕರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಅನ್ಯಕೋಮಿನ ವಿದ್ಯಾರ್ಥಿನಿಯರ ವಿರುದ್ಧ ಯಾರೂ ಅಲ್ಲಿ ಬೆರಳು ತೋರಿಸುತ್ತಿಲ್ಲ.


ಆ ವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಅನ್ಯ ಕೋಮಿನ ನೂರಾರು ಹಿಂದೂ ವಿದ್ಯಾರ್ಥಿನಿಯರನ್ನು ಇದೇ ರೀತಿ ಚಿತ್ರೀಕರಿಸಲಾಗಿದೆ. ಆ ವಿಡಿಯೋಗಳನ್ನು ಹಾಗೂ ಫೋಟೋಗಳನ್ನು ಕಾಲೇಜಿನ ವಿದ್ಯಾರ್ಥಿಗಳಿರುವ ವಿವಿಧ ವಾಟ್ಸ್ ಆ್ಯಪ್ ಗ್ರೂಪ್ ಗಳಲ್ಲಿ ಹಂಚಲಾಗಿದೆ ಎಂದು ಅವರು ಆಪಾದಿಸಿದ್ದಾರೆ. ಈ ನಡುವೆ ರಶ್ಮಿ ಸಾಮಂತ್ ಅವರ ಮನೆಗೆ ಪೊಲೀಸರು ಭೇಟಿ ನೀಡಿದ್ದಾರೆ ಎಂದು ಹೇಳಲಾಗಿದ್ದು, ಇದು ಮತ್ತೆ ಆಕ್ರೋಶಕ್ಕೆ ಕಾರಣವಾಗಿದೆ.

ಸದ್ಯ ಈ ವಿವಾದ ರಾಜಕೀಯ ಬಣ್ಣ ಪಡೆಯುತ್ತಿದ್ದು, ಈಗಾಗಲೇ ಬಿಜೆಪಿಯ ಹಿರಿಯ ನಾಯಕರು ಪೊಲೀಸರ ಕ್ರಮವನ್ನು ಖಂಡಿಸಿದ್ದು,  ರಾತ್ರಿ ರಶ್ಮಿ ಅವರನ್ನು ಹೆದರಿಸಲು ಪೊಲೀಸರನ್ನು ಮನೆಗೆ ಕಳುಹಿಸಿದ್ರಾ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸತ್ಯ ಹೇಳಿದರೂ ಪೊಲೀಸ್ ಕಿರುಕುಳವಾ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ ಟ್ವೀಟ್ ಮಾಡಿದ್ದಾರೆ.

ಉಡುಪಿ ನಗರದ ಅಂಬಲಪಾಡಿ ಬೈಪಾಸ್ ಬಳಿ ಇರುವ ನೇತ್ರ ಜ್ಯೋತಿ ಕಾಲೇಜಿನಲ್ಲಿ ಕೆಲ ಅನ್ಯ ಕೋಮಿನ ವಿದ್ಯಾರ್ಥಿನಿಯರು ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟು ಖಾಸಗಿ ದೃಶ್ಯಗಳನ್ನು ರೆಕಾರ್ಡ್ ಮಾಡಿ ಆ ವಿಡಿಯೋವನ್ನು ತಮ್ಮ ಕೋಮಿನ ವಿದ್ಯಾರ್ಥಿಗಳಿಗೆ ಕಳುಹಿಸುತ್ತಿದ್ದರು ಎಂಬ ಆರೋಪ ಕೇಳಿ ಬಂದಿದೆ. ಇನ್ನು ಈ ವಿಡಿಯೋವನ್ನು ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿತ್ತಿದ್ದರು ಎನ್ನಲಾಗಿದೆ. ಈ ಕೃತ್ಯ ಬೆಳಕಿಗೆ ಬಂದ ಬಳಿಕ ಉಳಿದ ವಿದ್ಯಾರ್ಥಿನಿಯರು ತರಾಟೆಗೆ ತೆಗೆದುಕೊಂಡಿದ್ದು ಕಾಲೇಜಿನಲ್ಲಿ ದೊಡ್ಡ ಗಲಾಟೆಯೇ ಸಂಭವಿಸಿದೆ.

 

 


Share Information
Advertisement
Click to comment

You must be logged in to post a comment Login

Leave a Reply