ಮಣಿಪಾಲ,ಫೆಬ್ರವರಿ 08: ನೇಣು ಬಿಗಿದುಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಮಣಿಪಾಲದ ಸಮೀಪದ ಸರಳೇಬೆಟ್ಟು ಎಂಬಲ್ಲಿ ನಡೆದಿದೆ.
ಸರಳಬೆಟ್ಟು ನಗರಸಭಾ ಬಿಜೆಪಿ ಸದಸ್ಯೆ ವಿಜಯಲಕ್ಷ್ಮೀ ಅವರ ಸಹೋದರ ಮಂಜುನಾಥ್ ಕಾಮತ್(51) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾರೆ. ಸಮಾಜಮುಖಿಯಾಗಿ ಸೇವೆ ಸಲ್ಲಿಸುತ್ತಿದ್ದ ಮಂಜುನಾಥ್ ಕಾಮತ್ ಅವರು ಅವಿವಾಹಿತರಾಗಿದ್ದು, ಮಣಿಪಾಲ ಸುತ್ತಮುತ್ತ ರಿಕ್ಷಾ ಚಾಲಕರಾಗಿ ದುಡಿಯುತ್ತಿದ್ದರು. ಇವರು ವೈಯಕ್ತಿಕ ಕಾರಣದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.