UDUPI
ಉಡುಪಿ ಲಾಡ್ಜ್ ಒಂದರಲ್ಲಿ ಕೆಂಗೇರಿ ನಿವಾಸಿ ನೇಣು ಬಿಗಿದು ಆತ್ಮಹತ್ಯೆ

ಉಡುಪಿ ಜೂನ್ .17: ಉಡುಪಿಯಲ್ಲಿ ಆತ್ಮಹತ್ಯೆ ಸರಣಿ ಮುಂದುವರೆದಿದ್ದು, ಇಂದು ಉಡುಪಿಯ ಲಾಡ್ಜ್ ಒಂದರಲ್ಲಿ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಮೃತ ಯುವಕನನ್ನು ಬೆಂಗಳೂರು ಕೆಂಗೇರಿ ನಿವಾಸಿ ವೀರಭದ್ರ(22) ಎಂದು ಗುರುತಿಸಲಾಗಿದೆ. ಈತ ಉಡುಪಿ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ ಸಮೀಪದ ಲಾಡ್ಜ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆತ್ಮಹತ್ಯೆಗೆ ಮುನ್ನ ನನ್ನವರು ಯಾರೂ ಇಲ್ಲ ಎಂದು ಡೆತ್ ನೋಟ್ ಬರೆದಿಟ್ಟಿರುವ ಯುವಕ ತನ್ನ ಮೊಬೈಲ್,ದಾಖಲೆಗಳ ಸುಟ್ಟು ಹಾಕಿದ್ದಾನೆ. ಸಮಾಜ ಸೇವಕ ನಿತ್ಯಾನಂದ ವಳಕಾಡು ಶವವನ್ನು ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಮೃತದೇಹ ಶಿಫ್ಟ್ ಮಾಡಿದ್ದಾರೆ. ಘಟನೆ ಕುರಿತಂತೆ ಉಡುಪಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
