ಉಡುಪಿ ಅಕ್ಟೋಬರ್ 04: ರಾಜ್ಯ ಸರಕಾರದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ನೇಮಕಗೊಂಡಿದ್ದರೂ ನೇಮಕಾತಿ ಆದೇಶ ಸ್ವೀಕರಿಸದ ಕಾರಣಕ್ಕೆ ಬ್ರಹ್ಮಾವರ ಶೆಟ್ಟಿಬೆಟ್ಟು ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕ ವೆಂಕಟೇಶ್ ಪಿ. ಬಿ. ಅವರನ್ನು ಅಮಾನತು ಮಾಡಲಾಗಿದೆ.


ಹಲವು ಬಾರಿ ದೂರವಾಣಿ ಮೂಲಕ ಸಂಪರ್ಕಿಸಿದರೂ ನೇಮಕಾತಿ ಆದೇಶ ಪ್ರತಿಯನ್ನು ಸ್ವೀಕರಿಸಲು ಅವರು ನಿರಾಕರಿಸಿದ್ದಾರೆ. ಕಾರಣ ಕೇಳಿ ನೋಟಿಸ್ ನೀಡಲಾಗಿದ್ದು, ಈವರೆಗೂ ನೋಟಿಸ್‌ಗೆ ಸಮಜಾಯಿಷಿ ನೀಡಿಲ್ಲ. ಈ ಕಾರಣಕ್ಕೆ ಅವರನ್ನು ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ಹೇಳಲಾಗಿದೆ.

Share Information