Connect with us

LATEST NEWS

ಉಡುಪಿ: ಚಾಲಕಿಯ ನಿಯಂತ್ರಣ ತಪ್ಪಿದ ಕಂದಕಕ್ಕೆ ಬಿದ್ದ ಕಾರು

ಉಡುಪಿ, ಮಾರ್ಚ್ 04: ಚಾಲಕಿಯ ನಿಯಂತ್ರಣ ತಪ್ಪಿದ ಕಾರು ಕಂದಕಕ್ಕೆ ಉರುಳಿದ ಘಟನೆ ಉಡುಪಿಯಲ್ಲಿ ನಡೆದಿದೆ.

ಉಡುಪಿಯಿಂದ ಮಣಿಪಾಲಕ್ಕೆ ತೆರಳುತ್ತಿದ್ದ ಕಾರು ಲಕ್ಷ್ಮಿಂದ್ರ ನಗರದ ಬಳಿ ನಿಯಂತ್ರಣ ತಪ್ಪಿ ಕಂದಕಕ್ಕೆ ಇಳಿದಿದೆ. ಈ ಸಂದರ್ಭ ರಸ್ತೆ ಬದಿ ನಿಲ್ಲಿಸಲಾಗಿದ್ದ ದ್ವಿಚಕ್ರ ವಾಹನಗಳು ನಜ್ಜುಗುಜ್ಜಾಗಿದೆ.

5 ದ್ವಿಚಕ್ರ ವಾಹನಗಳು ಕಾರಿನ ಜೊತೆಗೆ ಮಳೆಗಾಲದಲ್ಲಿ ನೀರು ಹರಿಯುವ ತೋಡಿಗೆ ಬಿದ್ದಿದ್ದು. ಕೆಳಭಾಗದಲ್ಲಿ ಮರವಿದ್ದ ಕಾರಣ ಕಾರು ಸಂಪುರ್ಣವಾಗಿ ಕಂದಕಕ್ಕೆ ಉರುಳದೆ ನಿಂತಿದೆ. ಅದೃಷ್ಟವಶಾತ್ ಕಾರು ಚಾಲಕಿಗೆ ಯಾವುದೇ ಗಾಯಗಳು ಆಗಿಲ್ಲ.

ರಸ್ತೆ ಬದಿ ನಿಲ್ಲಿಸಲಾಗಿದ್ದ ನ್ಯೂ ಮಣಿಪಾಲ್ ಬಜಾರ್ ನ ಸೆಕೆಂಡ್ ಹ್ಯಾಂಡ್ ವಾಹನಗಳಗೆ ಕಾರು ಡಿಕ್ಕಿಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Video:

Share Information
Continue Reading
Advertisement
Click to comment

Leave a Reply

Your email address will not be published. Required fields are marked *