Connect with us

    LATEST NEWS

    ಉಡುಪಿ : ನೀರಿಗಿಳಿದ ಮೂವರು ಪ್ರವಾಸಿಗರು ಸಮುದ್ರಪಾಲು, ಓರ್ವ ಮೃತ್ಯು…!!

    ಉಡುಪಿ: ನೀರಿಗಿಳಿದ ಮೂರು ಪ್ರವಾಸಿಗರರು ಸಮುದ್ರಪಾಲಾದ ಘಟನೆ ಉಡುಪಿಯ ಮಲ್ಪೆ ಬೀಚ್‌ನಲ್ಲಿ ಸಂಭವಿಸಿದೆ. ಸಮುದ್ರದ ಅಲೆಗಳ ಸೆಳೆತಕ್ಕೆ ಕೊಚ್ಚಿಹೋದ ಮೂವರ ಪೈಕಿ ಓರ್ವ ಸಾವನ್ನಪ್ಪಿದರೆ ಮತ್ತಿಬ್ಬರನ್ನು ರಕ್ಷಿಸಲಾಗಿದೆ.

    ಮೃತರನ್ನು ಹಾಸನ ಜಿಲ್ಲೆಯ ದಾಬೆಬೇಲೂರು ನಿವಾಸಿ ಗಿರೀಶ್ ಎಂದು ಗುರುತಿಸಲಾಗಿದೆ. ಸಂತೋಷ್ ಹಾಗೂ ಮತ್ತೊಬ್ಬರನ್ನು ರಕ್ಷಿಸಲಾಗಿದ್ದು, ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದಾಬೆ ಬೇಲೂರಿನಿಂದ 20 ಜನರು ಮಲ್ಪೆ ಬೀಚ್ ಗೆ ಪ್ರವಾಸಕ್ಕೆ ಬಂದಿದ್ದರು. ಸಮುದ್ರಕ್ಕಿಳಿದು ಸ್ನಾನ ಮಾಡುತ್ತಿದ್ದಾಗ ಮೂವರು ಅಲೆಗಳ ಸೆಳೆತಕ್ಕೆ ಕೊಚ್ಚಿಹೋಗಿದ್ದಾರೆ. ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಮುಳುಗು ತಜ್ಞ ಈಶ್ವರ್ ಮಲ್ಪೆ ಹಾಗೂ ತಂಡದವರು ಮೂವರನ್ನು ರಕ್ಷಿಸಿ, ದಡಕ್ಕೆ ತಂದಿದ್ದಾರೆ. ಮೂವರ ಪೈಕಿ ಗಂಭೀರ ಸ್ಥಿತಿಯಲ್ಲಿದ್ದ ಗಿರೀಶ್ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಇಬ್ಬರು ಬಚಾವ್ ಆಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *