LATEST NEWS
ಉಡುಪಿ : ಕುಂದಾಪುರದಲ್ಲಿ ಯಮರೂಪಿ ಟಿಪ್ಪರ್ ಧಾವಂತಕ್ಕೆ ವಿದ್ಯಾರ್ಥಿ ಬಲಿ, ಇಬ್ಬರು ಪಾರು..!
ಉಡುಪಿ : ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಪದವಿ ಕಾಲೇಜು ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟರೆ ಮತ್ತಬ್ಬರು ಪವಾಡ ಸದೃಶ್ಯವಾಗಿ ಸಾವಿನ ದವಡೆಯಿಂದ ಪಾರಾದ ಘಟನೆ ಉಡುಪಿ ಕುಂದಾಪುರದ ಕೋಟೇಶ್ವರ ಹಾಲಾಡಿ ರಸ್ತೆಯ ಕಕ್ಕೇರಿ ಎಂಬಲ್ಲಿ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿ ನಾಗೂರು ನಿವಾಸಿ, ಕೋಟೇಶ್ವರದ ಕಾಳಾವರ ವರದರಾಜ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿಎಸ್ಸಿ ವಿದ್ಯಾರ್ಥಿ ಧನುಷ್ (19) ಎಂದು ಗುರುತಿಸಲಾಗಿದೆ.
ಧನುಷ್ ಮಂಗಳವಾರ ಮಧ್ಯಾಹ್ನ ತನ್ನ ಇಬ್ಬರು ಸ್ನೇಹಿತರೊಂದಿಗೆ ಕಾಲೇಜು ಮುಗಿಸಿ ಕೋಟೇಶ್ವರದತ್ತ ರಸ್ತೆ ಬದಿಯ ಇಂಟರ್ ಲಾಕ್ ಮೇಲೆ ನಡೆದುಕೊಂಡು ಹೋಗುತ್ತಿದ್ದರು. ಯಮರೂಪಿಯಾಗಿ ಅತೀ ವೇಗವಾಗಿ ಹಿಂದಿನಿಂದ ಬಂದ ಟಿಪ್ಪರ್ ಲಾರಿ ಢಿಕ್ಕಿ ಹೊಡೆದು ಆತನ ಮೇಲೆಯೇ ಹರಿದಿದೆ. ಧನುಷ್ ಸ್ಥಳದಲ್ಲೇ ಮೃತಪಟ್ಟರೆ, ಆತನ ಇಬ್ಬರು ಸ್ನೇಹಿತರು ಪಕ್ಕಕ್ಕೆ ಹಾರಿದ್ದರಿಂದ ಪವಾಡ ಸದೃಶ್ಯವಾಗಿ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಕುಂದಾಪುರ ಸಂಚಾರ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
You must be logged in to post a comment Login