LATEST NEWS
ಉಡುಪಿ – ಟಾಯ್ಲೆಟ್ ನಲ್ಲಿ ಮೊಬೈಲ್ ಇಟ್ಟು ವಿಡಿಯೋ ರೆಕಾರ್ಡ್ ವಿಧ್ಯಾರ್ಥಿನಿಯರು ಸಸ್ಪೆಂಡ್…!!
ಉಡುಪಿ ಜುಲೈ 22 : ವಿಧ್ಯಾರ್ಥಿನಿಯರು ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ರೆಕಾರ್ಡ್ ಮಾಡಿದ ಘಟನೆ ಉಡುಪಿಯ ಖಾಸಗಿ ನೇತ್ರ ಚಿಕಿತ್ಸಾಲಯ ಹಾಗೂ ನರ್ಸಿಂಗ್ ಹೋಂನಲ್ಲಿ ನಡೆದಿದ್ದು , ಇದೀಗ ಮೂವರು ವಿದ್ಯಾರ್ಥಿನಿಯರನ್ನು ಕಾಲೇಜಿನಿಂದ ಅಮಾನತುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.
ಮಾಹಿತಿ ಪ್ರಕಾರ ವಿಧ್ಯಾರ್ಥಿನಿಯರ ಒಂದು ಗುಂಪು ಶೌಚಾಲಯದಲ್ಲಿ ಕ್ಯಾಮರಾ ಇಟ್ಟು ಇನ್ನೊಂದು ಗುಂಪಿನ ವಿಧ್ಯಾರ್ಥಿನಿಯರ ವಿಡಿಯೋ ರೆಕಾರ್ಡ್ ಮಾಡಿ ವಾಟ್ಸಪ್ ಗ್ರೂಪ್ ಗಳಲ್ಲಿ ಹಂಚಿಕೊಂಡಿದೆ. ಇದು ಇನ್ನೊಂದು ಗುಂಪಿಗೆ ಗೊತ್ತಾಗುತ್ತಿದ್ದಂತೆ ವಿಧ್ಯಾರ್ಥಿನಿಯರು ಆಕ್ಷೇಪಿಸಿದ್ದು, ಗಲಾಟೆ ನಡೆದಿದೆ. ಈ ವಿಚಾರ ಆಸ್ಪತ್ರೆಯ ಆಡಳಿತ ಮಂಡಳಿಗೆ ತಿಳಿದು ಆಡಳಿತ ಮಂಡಳಿ ವಿದ್ಯಾರ್ಥಿನಿಯರಿಂದ ಮುಚ್ಚಳಿಕೆ ಬರೆಸಿಕೊಂಡು ಶಿಸ್ತು ಕ್ರಮ ಜರಗಿಸಿದೆ ಎಂದು ಮೂಲಗಳು ತಿಳಿಸಿವೆ. ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿಲ್ಲ.
You must be logged in to post a comment Login