LATEST NEWS
ಉಡುಪಿಯಲ್ಲಿ ಈವರೆಗೆ ಟೊಮೇಟೊ ಫ್ಲೂ ಪತ್ತೆಯಾಗಿಲ್ಲ -ಜಿಲ್ಲಾಧಿಕಾರಿ ಸ್ಪಷ್ಟನೆ

ಉಡುಪಿ ಮೇ 16: ಉಡುಪಿ ಜಿಲ್ಲೆಯಲ್ಲಿ ಈವರೆಗೆ ಟೊಮೆಟೋ ಪ್ಲೂ ಪತ್ತೆಯಾಗಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಸ್ಪಷ್ಟನೆ ನೀಡಿದ್ದಾರೆ.
ಉಡುಪಿ ಜಿಲ್ಲೆಯ 4 ವರ್ಷದ ಮಗುವಿನಲ್ಲಿ ಟೊಮೆಟೊ ಜ್ವರ ಕಾಣಿಸಿಕೊಂಡಿದೆ ಎಂಬ ಶಂಕೆ ವ್ಯಕ್ತವಾದ ಬೆನ್ನಲ್ಲೇ ಜಿಲ್ಲಾಧಿಕಾರಿ ಸ್ಪಷ್ಟನೆ ನೀಡಿದ್ದು. ಮಕ್ಕಳಲ್ಲಿ ಜ್ವರ ಕಂಡು ಬಂದಾಗ ತಾಂತ್ರಿಕವಾಗಿ ಪರೀಕ್ಷೆ ನಡೆಸಲಾಗುತ್ತೆ, ಟೊಮೆಟೊ ಫ್ಲೂಗೆ ಹೋಲುವಂತಹ ಒಂದು ಪ್ರಕರಣ ಮೂರು ತಿಂಗಳ ಹಿಂದೆ ಪತ್ತೆಯಾಗಿತ್ತು. ಫೂಟ್ ಆಂಡ್ ಹ್ಯಾಂಡ್ ಲಕ್ಷಣಗಳಿರುವ ಪ್ರಕರಣ ಇದಾಗಿತ್ತು. ಈ ಬಗ್ಗೆ ಆರೋಗ್ಯ ಇಲಾಖೆಗೆ ನಾವು ವರದಿ ಮಾಡಿದ್ದೇವೆ. ಟೊಮೇಟೋ ಫ್ಲೂ ಮತ್ತು ಈ ಪ್ರಕರಣಕ್ಕೆ ಯಾವುದೇ ಸಂಬಂಧ ಇಲ್ಲ, ಇತ್ತೀಚಿಗೆ ಯಾವುದಾದರೂ ಹೊಸ ಪ್ರಕರಣ ಬಂದಿದೆಯೇ ಮಾಹಿತಿ ಸಂಗ್ರಹಿಸುತ್ತೇವೆ

ಖಾಸಗಿ ಕ್ಲಿನಿಕ್ ಗಳಿಂದಲೂ ಮಾಹಿತಿ ಸಂಗ್ರಹಿಸುತ್ತಿದ್ದೇವೆ ಎಂದರು. ಅಲ್ಲದೆ ಜಿಲ್ಲೆಯ ಎಲ್ಲಾ ಮಕ್ಕಳ ತಜ್ಞರಿಗೂ ಅಲರ್ಟ್ ಇರಲು ಸೂಚಿಸಿದ್ದೇವೆ. ಕೇರಳದಲ್ಲಿ ಪ್ರಕರಣ ಪತ್ತೆಯಾದ ನಂತರ ಮಕ್ಕಳ ತಜ್ಞರಿಗೆ ಸೂಚನೆಗಳನ್ನು ಕೊಟ್ಟಿದ್ದೇವೆ. ಟೊಮೆಟೊ ಫ್ಲೂ ಹೋಲುವಂತಹ ಜ್ವರ ಬಂದರೂ ತಿಳಿಸಲು ಹೇಳಿದ್ದೇವೆ. ಸದ್ಯ ಜಿಲ್ಲೆಯಲ್ಲಿ ಈವರೆಗೆ ಯಾವುದೇ ಪ್ರಕರಣ ವರದಿಯಾಗಿಲ್ಲ. ಪೋಷಕರು ಆತಂಕ ಪಡುವ ಅಗತ್ಯ ಇಲ್ಲ.