Connect with us

LATEST NEWS

ಉಡುಪಿ ಜಿಲ್ಲೆ ದೇಶದಲ್ಲೇ ಪ್ರಸಿದ್ದ ಪ್ರವಾಸಿ ತಾಣವಾಗಲಿ : ಶಾಸಕ ರಘುಪತಿ ಭಟ್

ಉಡುಪಿ : ಉಡುಪಿ ಜಿಲ್ಲೆಯಲ್ಲಿನ ಪ್ರವಾಸಿ ತಾಣಗಳ ಬಗ್ಗೆ ದೇಶದ ಪ್ರತಿಷ್ಠಿತ ಬ್ಲಾಗರ್ ಗಳ ಮೂಲಕ, ಜಿಲ್ಲೆಯಲ್ಲಿನ ಹಲವು ಪ್ರವಾಸಿ ತಾಣಗಳ ಬಗ್ಗೆ ವಿನೂತನವಾಗಿ ಅತೀ ಹೆಚ್ಚಿನ ರೀತಿಯಲ್ಲಿ ಪ್ರಚುರಪಡಿಸಿದ್ದು, ಜಿಲ್ಲೆಯನ್ನು ದೇಶದ ಪ್ರಸಿದ್ದ ಪ್ರವಾಸಿತಾಣವನ್ನಾಗಿ ಮಾಡಲು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುವುದಾಗಿ ಶಾಸಕ ರಘುಪತಿ ಭಟ್ ಹೇಳಿದರು.


ಅವರು ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ, ಉಡುಪಿ ಜಿಲ್ಲಾ ರಜತ ಮಹೋತ್ಸವ ಸಮಾರಂಭ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರಾಯೋಜಕತ್ವದಲ್ಲಿ ನಿರ್ಮಿಸಿರುವ ಉಡುಪಿ ರಜತ ಮಹೋತ್ಸವ ರಥಕ್ಕೆ ಚಾಲನೆ ನೀಡಿ ಮಾತನಾಡಿದರು.

ಉಡುಪಿ ಜಿಲ್ಲೆಯ ರಜತ ಉತ್ಸವದ ಅಂಗವಾಗಿ ಜಿಲ್ಲೆಯನ್ನು ಮುಂದಿನ 25 ವರ್ಷಗಳಲ್ಲಿ ಎಲ್ಲಾ ಕ್ಷೇತ್ರದಲ್ಲಿ ಸಮಗ್ರವಾಗಿ ಅಭಿವೃದ್ದಿಪಡಿಸುವ ಬಗ್ಗೆ ಯೋಜನೆ ಮತ್ತು ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ, ದಿಕ್ಸೂಚಿ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ವಿವಿದ ಕ್ಷೇತ್ರಗಳ ತಜ್ಞರು ನೀಡಿರುವ ಸಲಹೆಗಳನ್ನು ದಾಖಲೀಕರಣ ಮಾಡಿ, ಅದರಂತೆ ಜಿಲ್ಲೆಯನ್ನು ಅಭಿವೃದ್ದಿಗೊಳಿಸಲಾಗುವುದು. ರಜತ ಉತ್ಸವ ಅಂಗವಾಗಿ ಜಿಲ್ಲೆಯ ಪ್ರಗತಿ ಮತ್ತು ಸಂಸ್ಕೃತಿಯನ್ನು ಬಿಂಬಿಸುವ ರಥವನ್ನು ಸಿದ್ದಪಡಿಸಲಾಗಿದ್ದು, ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಸಂಚರಿಸುವ ಈ ರಥವು ಜಿಲ್ಲೆಯ ಪ್ರಗತಿಯನ್ನು ಎಲ್ಲೆಡೆ ಸಾರಲಿದೆ ಎಂದರು.

ಜಿಲ್ಲಾಧಿಕಾರಿ ಕೂರ್ಮರಾವ್ ಎಂ ಮಾತನಾಡಿ, ರಜತ ಉತ್ಸವದ ರಥವು 25 ದಿನಗಳ ಕಾಲ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಸಂಚರಿಸಲಿದ್ದು, ಜಿಲ್ಲೆಯ ವೈವಿಧ್ಯಮಯ ಪ್ರವಾಸಿತಾಣಗಳ ಬಗ್ಗೆ ಮಾಹಿತಿ ನೀಡಲಿದ್ದು,ರಜತ ಉತ್ಸವದ ಅಂಗವಾಗಿ ಜನವರಿ 20 ರಿಂದ 22 ರ ವರಗೆ ಮಲ್ಪೆ ಬೀಚ್ ನಲ್ಲಿ ಆಕರ್ಷಕ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿವೆ ಎಂದರು. ಎಸ್‌ಸಿಡಿಸಿಸಿ ಬ್ಯಾಂಕ್ ಆಧ್ಯಕ್ಷ ಡಾ.ರಾಜೇಂದ್ರ ಕುಮಾರ್ ಮಾತನಾಡಿ, ಬ್ಯಾಕಿಂಗ್ ಕ್ಷೇತ್ರದ ತವರೂರಾದ ಉಡುಪಿ ಜಿಲ್ಲೆಯಲ್ಲಿ ಕೈಗಾರಿಕೆಗಳು ಹೆಚ್ಚಿನ ಸಂಖ್ಯೆಯಲ್ಲಿ ಆರಂಭಗೊಂಡು ಜಿಲ್ಲೆಯು ಆರ್ಥಿಕವಾಗಿ ಮತ್ತಷ್ಟು ಸದೃಢವಾಗಬೇಕಿದೆ, ಪ್ರವಾಸೋದ್ಯಮವು ಅಂತಾರಾಷ್ಟ್ರೀಯ ಪ್ರಸಿದ್ದಿ ಪಡೆಯುವಂತಾಗಲಿ ಎಂದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *