Connect with us

    LATEST NEWS

    ಉಡುಪಿ – ವಿಧ್ಯಾರ್ಥಿನಿಯರ ವಿಡಿಯೋ ಚಿತ್ರೀಕರಿಸಿ ಮೂವರು ವಿಧ್ಯಾರ್ಥಿನಿಯರಿಗೆ ಜಾಮೀನು…!!

    ಉಡುಪಿ ಜುಲೈ 28 : ದೇಶದಾದ್ಯಂತ ಸುದ್ದಿಯಲ್ಲಿರುವ ಉಡುಪಿಯ ನೇತ್ರಾ ಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದ ಮೂವರು ವಿದ್ಯಾರ್ಥಿನಿಯರಿಗೆ ಉಡುಪಿ ನ್ಯಾಯಾಲಯವು ಇಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.


    ವಿಧ್ಯಾರ್ಥಿನಿಯರು ಮತ್ತೊಂದು ವಿಧ್ಯಾರ್ಥಿನಿ ವಾಶ್ ರೂಂ ನಲ್ಲಿರು ವೇಳೆ ಮೊಬೈಲ್ ನಲ್ಲಿ ವಿಡಿಯೋ ಚಿತ್ರೀಕರಿಸಿದ್ದಾರೆ ಎಂಬ ಆರೋಪ ಇದ್ದು, ಈ ಹಿನ್ನಲೆ ಆರೋಪಿ ವಿದ್ಯಾರ್ಥಿನಿಯರು ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಕಲಂ: 509,204,175,34 ಐ,ಪಿ,ಸಿ,ಮತ್ತು 66(ಇ) ಐಟಿ ಕಾಯಿದೆಯಡಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಈ ಮೂವರು ವಿದ್ಯಾರ್ಥಿನಿಯರು ಇಂದು ಉಡುಪಿಯ ಪ್ರಥಮ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್ ಸಿ ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ.

    ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶ ಶ್ಯಾಮ್ ಪ್ರಕಾಶ್ ಮೂವರು ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶ ನೀಡಿದ್ದಾರೆ. ತನಿಖಾಧಿಕಾರಿಗಳಿಗೆ ತನಿಖೆಗೆ ಸಹಕರಿಸುವುದು, ವಿಚಾರಣೆ ದಿನ ನ್ಯಾಯಾಲಯಕ್ಕೆ ಕಡ್ಡಾಯವಾಗಿ ಹಾಜರಾಗುವುದು, ಸಾಕ್ಷಿ ಗಳಿಗೆ ಯಾವುದೇ ಬೆದರಿಕೆಯೊಡ್ಡದಿರುವುದು ಮತ್ತು ತಲಾ 20,000ರೂ. ಮೊತ್ತ ಬಾಂಡ್ ನ್ಯಾಯಾಲಯಕ್ಕೆ ಸಲ್ಲಿಸುವುದು ಸೇರಿದಂತೆ ಹಲವು ಶರತುಗಳನ್ನು ನ್ಯಾಯಾಲಯ ವಿಧಿಸಿದೆ ಆರೋಪಿಗಳ ಪರ ಉಡುಪಿಯ ನ್ಯಾಯವಾದಿ ಅಸದುಲ್ಲಾ ಕಟಪಾಡಿ ವಾದಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply