LATEST NEWS
ಉಡುಪಿ ವಿಡಿಯೋ ಪ್ರಕರಣ – ತನಿಖಾಧಿಕಾರಿ ಬದಲಾವಣೆ

ಉಡುಪಿ ಜುಲೈ 29: ಉಡುಪಿಯ ನೇತ್ರಜ್ಯೋತಿ ಕಾಲೇಜಿನಲ್ಲಿ ನಡೆದ ಶೌಚಾಲಯದ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ತನಿಖಾಧಿಕಾರಿಯನ್ನು ಉಡುಪಿ ಎಸ್‌ಪಿ ಬದಲಾಯಿಸಿದ್ದಾರೆ.
ಈ ಮೊದಲು ಪ್ರಕರಣದ ತನಿಖೆಯನ್ನು ಮಲ್ಪೆ ಸರ್ಕಲ್ ಇನ್‌ಸ್ಪೆಕ್ಟರ್ ಮಂಜುನಾಥ್ ಗೌಡ ಅವರು ನಿರ್ವಹಿಸುತ್ತಿದ್ದರು, ಆದರೆ ತನಿಖಾಧಿಕಾರಿಯನ್ನು ಬದಲು ಮಾಡಿ ಎಂದು ಎಬಿವಿಪಿಯಿಂದ ಒತ್ತಡ ಬಂದಿತ್ತು. ಪೊಲೀಸರು ಎಫ್ಐಆರ್ ದಾಖಲು ಮಾಡಲು ವಿಳಂಬ ಮಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಬಹಳ ಆಕ್ರೋಶ ವ್ಯಕ್ತವಾಗಿತ್ತು.

ಈ ಹಿನ್ನೆಲೆಯಲ್ಲಿ ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ ಅವರಿಗೆ ತನಿಖೆ ಜವಾಬ್ದಾರಿಯನ್ನ ನೀಡಲಾಗಿದೆ. ಮಹಿಳೆಯರಿಗೆ ಸಂಬಂಧಿಸಿದ ಪ್ರಕರಣ ಆಗಿರುವುದರಿಂದ, ವಿದ್ಯಾರ್ಥಿನಿಯರು, ಕಾಲೇಜು ಸಿಬ್ಬಂದಿ ಹೇಳಿಕೆ ದಾಖಲಿಸಲು ಸುಲಭವಾಗುವಂತೆ ತನಿಖಾ ತಂಡದಲ್ಲಿ ಹೆಚ್ಚುವರಿ ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ನೇಮಿಸಲು ಉಡುಪಿ ಎಸ್‌ಪಿ ಅಕ್ಷಯ್ ನಿರ್ಧರಿಸಿದ್ದಾರೆ. ಉಡುಪಿ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಪ್ರಕರಣವನ್ನು ಕೇಂದ್ರ ತನಿಖಾ ಸಂಸ್ಥೆಗೆ ವಹಿಸುವಂತೆ ಆಗ್ರಹಿಸಿದೆ