Connect with us

    LATEST NEWS

    ಉಡುಪಿ – ಸೆಪ್ಟಂಬರ್ 17 ರಂದು ಯೋಗಾಥಾನ್ ಕಾರ್ಯಕ್ರಮ: ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್.

    ಉಡುಪಿ, ಸೆಪ್ಟಂಬರ್ 09: ಉಡುಪಿ ಜಿಲ್ಲೆಯಲ್ಲಿ ಸೆಪ್ಟಂಬರ್ 17 ರಂದು 15000 ಮಂದಿಯಿಂದ ಏಕಕಾಲದಲ್ಲಿ ಯೋಗಾಭ್ಯಾಸ ಕಾರ್ಯಕ್ರಮ ನಡೆಯಲಿದ್ದು, ಈ ಕುರಿತಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ಸೂಚಿಸಿದರು.
    ಅವರು ಇಂದು ಉಡುಪಿ ತಾಲೂಕು ಕಚೇರಿ ಸಭಾಂಗಣದಲ್ಲಿ, ಯೋಗಾಥಾನ್ ಕಾರ್ಯಕ್ರಮ ಆಯೋಜನೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರವು ಈಗಾಗಲೇ ಯೋಗವನ್ನು ಶಾಲಾ ಮತ್ತು ಕಾಲೇಜು ಶಿಕ್ಷಣದಲ್ಲಿ ಪಠ್ಯವನ್ನಾಗಿ ಸೇರ್ಪಡೆ ಮಾಡಿದ್ದು, ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಈ ಬಗ್ಗೆ ಹೆಚ್ಚಿನ ಅರಿವು ಮೂಡಿಸುವ ಉದ್ದೇಶದಿಂದ ರಾಜ್ಯಾದ್ಯಂತ ಸೆಪ್ಟಂಬರ್ 17 ರಂದು ಏಕಕಾಲದಲ್ಲಿ 5 ಲಕ್ಷ ಜನರಿಂದ ಯೋಗಾಸನವನ್ನು ಆಯೋಜಿಸಿದ್ದು, ಉಡುಪಿ ಜಿಲ್ಲೆಯಿಂದ 15000 ಮಂದಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಗುರಿ ನೀಡಲಾಗಿದೆ ಎಂದರು.
    ಮಣಿಪಾಲದ ಮಾಹೆ ಕ್ರೀಡಾಂಗಣದಲ್ಲಿ ಯೋಗಾಥಾನ್ ಆಯೋಜಿಸಲು ಈಗಾಗಲೇ ಸ್ಥಳ ನಿಗದಿಪಡಿಸಿದ್ದು, ಜಿಲ್ಲೆಯ 20 ಪ್ರೌಢಶಾಲೆ, 14 ಪದವಿ ಪೂರ್ವ ಕಾಲೇಜು, 11 ಪದವಿ ಕಾಲೇಜು, 5 ಐಟಿಐ, 5 ಪ್ಯಾರಾ ಮೆಡಿಕಲ್ ಕಾಲೇಜುಗಳಿಂದ ಕನಿಷ್ಠ 300 ವಿದ್ಯಾರ್ಥಿಗಳನ್ನು ಕಾರ್ಯಕ್ರಮಕ್ಕೆ ಕರೆತರಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಪಟ್ಟ ಶಾಲಾ-ಕಾಲೇಜುಗಳ ಮುಖ್ಯೋಪಾಧ್ಯಾಯರಿಗೆ ಸೂಚನೆ ನೀಡಿದರು.
    ಕಾರ್ಯಕ್ರಮದಲ್ಲಿ 45 ನಿಮಿಷಗಳ ಕಾಲ ವಿವಿಧ ಯೋಗಾಸನಗಳ ಪ್ರದರ್ಶನ ನಡೆಯಲಿದ್ದು, 150 ಕ್ಕೂ ಹೆಚ್ಚು ಯೋಗ ಶಿಕ್ಷಕರು ಶಾಲಾ ಕಾಲೇಜುಗಳಿಗೆ ತೆರಳಿ ವಿದ್ಯಾರ್ಥಿಗಳಿಗೆ ಯೋಗಾಸನಗಳ ತರಬೇತಿ ನೀಡಲಿದ್ದು, ಯೋಗಾಥಾನ್ನಲ್ಲಿ ಭಾಗವಹಿಸುವ ವಿದ್ಯಾರ್ಥಿಗಳನ್ನು ಆನ್ಲೈನ್ನಲ್ಲಿ ನೊಂದಣಿ ಮಾಡುವಂತೆ ತಿಳಿಸಿದ ಅಪರ ಜಿಲ್ಲಾಧಿಕಾರಿಗಳು, ಎಲ್ಲಾ ಸರ್ಕಾರಿ ಕಚೇರಿಗಳ ಸಿಬ್ಬಂದಿಗಳು ಹಾಗೂ ಶಿಕ್ಷಕರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಸೂಚಿಸಿದರು.
    Share Information
    Advertisement
    Click to comment

    You must be logged in to post a comment Login

    Leave a Reply