Connect with us

    UDUPI

    ಉಡುಪಿ – ಯುವಜನೋತ್ಸವ ಅಂಗವಾಗಿ ಜಿಲ್ಲಾ ಮಟ್ಟದ ಮ್ಯಾರಥಾನ್

    ಉಡುಪಿ, ಆಗಸ್ಟ್ 28: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಯುವ ಸ್ಪಂದನ ಕೇಂದ್ರ, ಯುವ ಸಬಲೀಕರಣ ಸೇವೆಗಳು, ಡಾ. ಜಿ.ಶಂಕರ್ ಸರಕಾರಿ ಪ್ರಥಮ ದರ್ಜೆ ಕಾಲೇಜು ಅಜ್ಜರಕಾಡು ಉಡುಪಿ ಇವರ ರಾಷ್ಟ್ರೀಯ ಸೇವಾ ಯೋಜನೆ  ರೆಡ್ ರಿಬ್ಬನ್ ಕ್ಲಬ್ ಮತ್ತು ಉಡುಪಿ ಜಿಲ್ಲಾ ಅಮೆಚುರ್ ಅಥ್ಲೆಟಿಕ್ಸ್ ಅಸೋಸಿಯೇಷನ್, ಜಿಲ್ಲಾ ಸರ್ವೇಕ್ಷಣಾ ಘಟಕ ಎನ್.ಸಿ.ಡಿ ವಿಭಾಗ ಮತ್ತು ಲಯನ್ಸ್ ಕ್ಲಬ್ ಉಡುಪಿ  ರೋಟರಿ ಕ್ಲಬ್ ಕಲ್ಯಾಣಪುರ ಮತ್ತು ರೋಟರಿ ಕ್ಲಬ್ ಉಡುಪಿ ಮಿಡ್‌ಟೌನ್ ಇವರ ಸಂಯುಕ್ತ ಆಶ್ರಯದಲ್ಲಿ ಯುವಜನೋತ್ಸವ 2023-24 ಕಾರ್ಯಕ್ರಮದ ಅಂಗವಾಗಿ ಇಂದು ಅಜ್ಜರಕಾಡು ಡಾ. ಜಿ.ಶಂಕರ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನಿಂದ 5 ಕಿ.ಮೀ ವರೆಗೆ ಮ್ಯಾರಥಾನ್ ನಡೆಯಿತು.


    ಹೆಚ್.ಐ.ವಿ./ಏಡ್ಸ್ ಬಗ್ಗೆ ಅರಿವು ,ಸೇವಾ ಸೌಲಭ್ಯಗಳ ಮಾಹಿತಿ,ಕಳಂಕ ಮತ್ತು ತಾರತಮ್ಯವನ್ನು ತಡೆಗಟ್ಟುವುದು, ಹೆಚ್.ಐ.ವಿ./ಏಡ್ಸ್ ಕಾಯ್ದೆ 2017 ,ಉಚಿತ ರಾಷ್ಟ್ರೀಯ ಸಹಾಯವಾಣಿ 1097, ಎಸ್.ಟಿ.ಐ ಇತ್ಯಾದಿಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವುದು ಈ ಓಟದ ಮುಖ್ಯ ಉದ್ದೇಶವಾಗಿದ್ದು, ಪುರುಷರ ವಿಭಾಗ 5 ಕಿ,ಮೀ ಮ್ಯಾರಥಾನ್ ಓಟಕ್ಕೆ ಪ್ರಧಾನ  ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಶಾಂತವೀರ ಶಿವಪ್ಪ ಹಾಗೂ ಮಹಿಳೆಯರ ವಿಭಾಗದ 5 ಕಿ.ಮೀ. ಮ್ಯಾರಥಾನ್ ಓಟಕ್ಕೆ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿದರು.


    ಐದು ಕಿಲೋಮೀಟರ್ ಮ್ಯಾರಥಾನ್ ಪುರುಷ ವಿಭಾಗದಲ್ಲಿ ಪ್ರಯಾಗ ಸಿ ಶೆಟ್ಟಿ ಎಂಜಿಎA ಕಾಲೇಜ್ ಉಡುಪಿ. (ಪ್ರಥಮ), ಪ್ರಜ್ವಲ್ ಗೋಣಿ, ಬೋರ್ಡ್ ಕಾಲೇಜ್ ಉಡುಪಿ. (ದ್ವಿತೀಯ), ನಾಗರಾಜ ಸುರೇಶ ಅರಾವತ. ಬೋರ್ಡ್ ಕಾಲೇಜ್ ಉಡುಪಿ. (ತೃತಿಯ) ಹಾಗೂ ಮಹಿಳೆಯರ ಐದು ಕಿಲೋ ಮೀಟರ್ ಮ್ಯಾರಥಾನ್ ವಿಭಾಗದಲ್ಲಿ ನಂದಿನಿ ಎನ್ ಎಸ್ . ಎಂಜಿಎಂ ಕಾಲೇಜ್ (ಪ್ರಥಮ), ಪ್ರತಿಕ್ಷ ಎನ್.ಎಸ್.ಎ.ಎಂ. ಕಾಲೇಜ್ ನಿಟ್ಟೆ, (ದ್ವಿತೀಯ), ಚಂದ್ರಿಕಾ .ಡಾ ಜಿ ಶಂಕರ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ಉಡುಪಿ (ತೃತೀಯ) ವಿಜೇತರಾದರು. ವಿಜೇತರಿಗೆ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ವಿತರಿಸಲಾಯಿತು. ಮ್ಯಾರಾಥಾನ್ ನಲ್ಲಿ 348 ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply