ಉಜಿರೆ ಫೆಬ್ರವರಿ 01 : ತಡೆಗೋಡೆಯೊಂದು ಕುಸಿದು ಬಿದ್ದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಜ.31 ರಂದು ನಡೆದಿದೆ.

ಮೃತ ಕಾರ್ಮಿಕನನ್ನು ಬಿಹಾರ ಮೂಲದ ರಾಕೇಶ್ ಕುಮಾರ್(25) ಎಂದು ಗುರುತಿಸಲಾಗಿದೆ.

ಉಜಿರೆ – ಸುರ್ಯ ರಸ್ತೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಏಕಾ ಏಕಿ ತಡೆಗೋಡೆ ಕುಸಿದು ಬಿದ್ದು ಅವಘಡ ಸಂಭವಿಸಿದೆ. ಪರಿಣಾಮ ಕಾರ್ಮಿಕ ರಾಕೇಶ್ ಎಂಬವರು ಮಣ್ಣಿನಡಿಯಲ್ಲಿ ಸಿಲುಕಿದ್ದಾರೆ. ಈ ವೇಳೆ ಕೂಡಲೇ ಸ್ಥಳೀಯರು ರಕ್ಷಣೆಗೆ ಧಾವಿಸಿ ಅವರನ್ನು ಹೊರತೆಗೆದು ತುರ್ತು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಸಾಗಿಸುವ ವೇಳೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆಯಲ್ಲಿ ಇಬ್ಬರು ಕಾರ್ಮಿಕರು ಸರ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.