UDUPI
ಉಜ್ವಲ ಯೋಜನೆಯಿಂದ ಬದುಕು ಹಸನಾಗಿದೆ -ದಿನಕರ ಬಾಬು
ಉಜ್ವಲ ಯೋಜನೆಯಿಂದ ಬದುಕು ಹಸನಾಗಿದೆ -ದಿನಕರ ಬಾಬು
ಉಡುಪಿ, ಸೆಪ್ಟೆಂಬರ್ 19: ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಉಜ್ವಲ ಯೋಜನೆಯಿಂದಾಗಿ ಗ್ರಾಮೀಣ ಮಹಿಳೆಯರ ಬದುಕು ಹಸನಾಗಿದೆ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ತಿಳಿಸಿದ್ದಾರೆ.ಅವರು ಮಂಗಳವಾರ ಉಡುಪಿಯ ಲಯನ್ಸ್ ಭವನದಲ್ಲಿ ನಡೆದ ಉಜ್ವಲ ಯೋಜನೆಯನ್ವಯ ಉಚಿತ ಅಡುಗೆ ಅನಿಲ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಗ್ರಾಮೀಣ ಮಹಿಳೆಯರು ಅಡುಗೆ ತಯಾರಿಗಾಗಿ ಹಿಂದಿನ ಹಳೆಯ ಇಂಧನ ವಿಧಾನಗಳನ್ನು ಬಳಸುತ್ತಿದ್ದು, ಇದರಿಂದ ಅವರ ಆರೋಗ್ಯದ ಮೇಲೆ ಗಂಭೀರ ಪರಿಣಾಮಗಳಾಗುತ್ತಿದ್ದು ಇದರಿಂದ ಅವರನ್ನು ರಕ್ಷಿಸಲು ಹಾಗೂ ಪರಿಸರವನ್ನು ರಕ್ಷಿಸುವ ಉದ್ದೇಶದಿಂದ ಜಾರಿಗೆ ಬಂದಿರುವ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಿಂದಾಗಿ ಗ್ರಾಮೀಣ ಕುಟುಂಬಗಳಿಗೆ ಉಚಿತ ಎಲ್‍ಪಿಜಿ ಸಂಪರ್ಕ ಒದಗಿಸುತ್ತಿದ್ದು, ಇದರಿಂದಾಗಿ ಗ್ರಾಮೀಣ ಮಹಿಳೆಯರ ಬದುಕು ಹಸನಾಗಿದೆ, ಅಲ್ಲದೇ ಕೇಂದ್ರ ಸರ್ಕಾರ ಹಲವು ಜನಪರ ಯೋಜನೆಗಳನ್ನು ರೂಪಿಸಿದ್ದು, ನಾಗರೀಕರು ಯೋಜನೆಗಳ ಪ್ರಯೋಜನ ಪಡೆಯುವಂತೆ ದಿನಕರ ಬಾಬು ಹೇಳಿದರು.
ಕಡೆಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ 100 ಕುಟುಂಬಗಳಿಗೆ ಉಚಿತ ಅನಿಲ ಸಿಲೆಂಡರ್ ವಿತರಿಸಲಾಯಿತು.