Connect with us

LATEST NEWS

ಉಕ್ರೇನ್‍ ರಷ್ಯಾ ಯುದ್ದ – ಕರ್ನಾಟಕ ಮೂಲದ ವಿದ್ಯಾರ್ಥಿ ಸಾವು

ಹಾವೇರಿ: ಉಕ್ರೇನ್ ಹಾಗೂ ರಷ್ಯಾ ನಡುವಿನ ಸಂಘರ್ಷದಲ್ಲಿ ಭಾರತೀಯರೊಬ್ಬರು ಸಾವನಪ್ಪಿರುವ ಬಗ್ಗೆ ವರದಿಯಾಗಿದ್ದು, ಮೃತರನ್ನು ಕರ್ನಾಟಕ ಮೂಲದ ವಿದ್ಯಾರ್ಥಿ ಎಂದು ಹೇಳಲಾಗಿದೆ.


ಹಾವೇರಿ ಜಿಲ್ಲೆಯ ರಾಣೆಬೇನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ್ ಮೃತಪಟ್ಟಿದ್ದಾರೆ ಎಂದು ಉಕ್ರೇನ್‍ನಲ್ಲಿರುವ ವಿದ್ಯಾರ್ಥಿಗಳು ತಿಳಿಸಿದ್ದಾರೆ.

ಕಾರ್ಕಿವ್‍ನಲ್ಲಿ ನಾಲ್ಕನೇ ವರ್ಷದ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದ ನವೀನ್ ಗ್ಯಾನಗೌಡ್ರು ಅಗತ್ಯ ವಸ್ತುಗಳನ್ನು ತರಲು ಹೊರಗೆ ಹೋಗಿದ್ದರು. ತರಕಾರಿಗಾಗಿ ಲೈನಿನಲ್ಲಿ ನಿಂತಿದ್ದ ವೇಳೆ ಉಕ್ರೇನ್-ರಷ್ಯಾ ಸೈನಿಕರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಇದೇ ಸಮಯದಲ್ಲಿ ಗುಂಡು ತಗುಲಿ ನವೀನ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

Advertisement
Click to comment

You must be logged in to post a comment Login

Leave a Reply