LATEST NEWS
ರಾಜತಾಂತ್ರಿಕವಾಗಿಯೇ ಕೊನೆಗೊಳ್ಳಲಿದೆ ಉಕ್ರೇನ್ ಯುದ್ದ – ಪುಟಿನ್
ಮಾಸ್ಕೋ: ಉಕ್ರೇನ್ ಮೇಲೆ ರಷ್ಯಾ ಸಾರಿರುವ ಯುದ್ಧ ಶೀಘ್ರದಲ್ಲೇ ನಿಲ್ಲಲಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ತಿಳಿಸಿದ್ದಾರೆ.
ಕಳೆದ 10 ತಿಂಗಳುಗಳಿಂದ ನಡೆಯುತ್ತಿರುವ ರಷ್ಯಾ ಹಾಗೂ ಉಕ್ರೇನ್ ನಡುವಿನ ಭೀಕರ ಯುದ್ಧವನ್ನು ಕೊನೆಗೊಳಿಸುವುದು ನಮ್ಮ ಗುರಿಯಾಗಿದೆ, ಇದಕ್ಕಾಗಿ ನಾವು ಶ್ರಮಿಸುತ್ತಿದ್ದೇವೆ. ಆದಷ್ಟು ಬೇಗ ಎಲ್ಲವನ್ನೂ ಕೊನೆಗೊಳಿಸಲು ನಾವು ಪ್ರಯತ್ನಿಸುತ್ತಿದ್ದೇವೆ ಎಂದು ಹೇಳಿದ್ದಾರೆ.
ಈ ನಡುವೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಮೊದಲ ಬಾರಿಗೆ ಅಮೇರಿಕಾಕ್ಕೆ ಬೇಟಿ ನೀಡಿದ್ದು, ಗುರುವಾರ ವಾಷಿಂಗ್ಟನ್‌ನಲ್ಲಿ ನಡೆದ ಗಣ್ಯರೊಂದಿಗಿನ ಭೇಟಿಯ ಬಳಿಕ ಅಮೆರಿಕ ಪೇಟ್ರಿಯಾಟ್ ಕ್ಷಿಪಣಿಯನ್ನು ಉಕ್ರೇನ್‌ಗೆ ನೀಡಿದೆ.
ಮಾಧ್ಯಮದೊಂದಿಗೆ ಮಾತನಾಡಿರುವ ಪುಟಿನ್, ರಷ್ಯಾ ಉಕ್ರೇನ್‌ನೊಂದಿಗಿನ ಯುದ್ಧವನ್ನು ಕೊನೆಗೊಳಿಸಲು ಬಯಸುತ್ತದೆ. ಇದು ಅನಿವಾರ್ಯ ರಾಜತಾಂತ್ರಿಕ ಪರಿಹಾರವಾಗಿದೆ ಎಂದು ಹೇಳಿಕೆ ನೀಡಿದ್ದಾರೆ.