DAKSHINA KANNADA
ಮಂಗಳೂರು: ಉಳಾಯಿಬೆಟ್ಟು ಅಪ್ರಾಪ್ತೆಯ ಗ್ಯಾಂಗ್ ರೇಪ್ ಮತ್ತು ಕೊಲೆ ಪ್ರಕರಣ,ಮೂವರು ಆರೋಪಿಗಳಿಗೆ ಮರಣದಂಡನೆ..!
2021 ನವೆಂಬರ್ ನಲ್ಲಿ ಮಂಗಳೂರು ಹೊರವಲಯದ ಉಳಾಯಿಬೆಟ್ಟು ಪರಾರಿಯ ರಾಜ್ ಟೈಲ್ಸ್ ಫ್ಯಾಕ್ಟರಿಯಲ್ಲಿ 8 ವರ್ಷ ಬಾಲಕಿಯ ಮೇಲೆ ನಡೆದ ಗ್ಯಾಂಗ್ ರೇಪ್ ಮತ್ತು ಕೊಲೆ ಪ್ರಕರಣದ ಮೂರು ಮಂದಿ ಆರೋಪಿಗಳಿಗೆ ಜಿಲ್ಲಾ ಸತ್ರ ನ್ಯಾಯಾಲಯ ಮರಣ ದಂಡನೆ ಶಿಕ್ಷೆ ನೀಡಿ ಆದೇಶ ಹೊರಡಿಸಿದೆ.
ಮಂಗಳೂರು: 2021 ನವೆಂಬರ್ ನಲ್ಲಿ ಮಂಗಳೂರು ಹೊರವಲಯದ ಉಳಾಯಿಬೆಟ್ಟು ಪರಾರಿಯ ರಾಜ್ ಟೈಲ್ಸ್ ಫ್ಯಾಕ್ಟರಿಯಲ್ಲಿ 8 ವರ್ಷ ಬಾಲಕಿಯ ಮೇಲೆ ನಡೆದ ಗ್ಯಾಂಗ್ ರೇಪ್ ಮತ್ತು ಕೊಲೆ ಪ್ರಕರಣದ ಮೂರು ಮಂದಿ ಆರೋಪಿಗಳಿಗೆ ಜಿಲ್ಲಾ ಸತ್ರ ನ್ಯಾಯಾಲಯ ಮರಣ ದಂಡನೆ ಶಿಕ್ಷೆ ನೀಡಿದೆ. ರಾಜ್ಯ ಇತಿಹಾಸದಲ್ಲೇ ಮರಣ ದಂಡನೆ ನೀಡಿದ ಮೊದಲ ಪ್ರಕರಣ ಇದಾಗಿದೆ.
ಜಯಸಿಂಗ್, ಮುಕೇಶ್ ಸಿಂಗ್, ಮನೀಶ್ ತಿರ್ಕಿ ಮರಣ ದಂಡನೆ ಶಿಕ್ಷೆಗೆ ಗುರಿಯಾಗಿರುವ ಅಪರಾಧಿಗಳಾಗಿದ್ದಾರೆ. ಪ್ರಕರಣದ ತನಿಖೆಯನ್ನು ಅಂದಿನ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಜಾನ್ಸನ್ ಡಿಸೋಜಾ ರವರು ಕೈಗೊಂಡು ಆರೋಪಿಗಳ ವಿರುದ್ಧ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು. ಮೃತ ಬಾಲಕಿಯ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡುವಂತೆ ನ್ಯಾಯಾಧೀಶರು ಆದೇಶ ಮಾಡಿದ್ದಾರೆ.
2021 ನವೆಂಬರ್ ನಲ್ಲಿ ನಡೆದಿದ್ದ ಈ ಪ್ರಕರಣ ಇಡೀ ಮಂಗಳೂರು ನಗರವನ್ನೇ ಬೆಚ್ಚಿ ಬೀಳಿಸಿದ್ದು ಮಾತ್ರವಲ್ಲದೆ ಜನರು ತಲೆತಗ್ಗಿಸುವಂತೆ ಮಾಡಿತ್ತು. ಉಳಾಯಿಬೆಟ್ಟು ಸಮೀಪದ ಪರಾರಿ ಎಂಬಲ್ಲಿನ ಟೈಲ್ಸ್ ಫ್ಯಾಕ್ಟರಿಯಲ್ಲಿ ಎಂಟು ವರ್ಷದ ಬಾಲಕಿಯ ಲೈಂಗಿಕ ದೌರ್ಜನ್ಯ ನಡೆಸಿ ಬಳಿಕ ಆರೋಪಿಗಳು ಬಾಲಕಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದರು.
You must be logged in to post a comment Login