Connect with us

    LATEST NEWS

    ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಭೀಕರ ರಸ್ತೆ ಅಪಘಾತ ಓರ್ವ ಸಾವು ನಾಲ್ವರು ಗಂಭೀರ ಗಾಯ

    ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಭೀಕರ ರಸ್ತೆ ಅಪಘಾತ ಓರ್ವ ಸಾವು ನಾಲ್ವರು ಗಂಭೀರ ಗಾಯ

    ಮಂಗಳೂರು ಮೇ.31: ಇಂದು ನಸುಕಿನ ಜಾವ ಇಲ್ಲಿನ ಕಳ್ಳಾಪು ಸಮೀಪದ ಸೇತುವೆಯಲ್ಲಿ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿ ಐದು ಮಂದಿ ಗಾಯಗೊಂಡಿದ್ದಾರೆ.

    ಮೃತನನ್ನು ಕಾವೂರು ನಿವಾಸಿ ಚೇತನ್ ಎಂದು ಗುರುತಿಸಲಾಗಿದೆ. ಬೆಳಿಗ್ಗೆ 5 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಚೇತನ್ ಕಾರನ್ನು ಓಡಿಸುತ್ತಿದ್ದನೆಂದು ತಿಳಿದುಬಂದಿದೆ. ಆಗ ಹಿಂದಿನಿಂದ ಕಾರು ಆಗಮಿಸಿ ಲಾರಿಗೆ ಗುದ್ದಿದೆ. ಅಪಘಾತದಲ್ಲಿ ಕಾರು ಸಂಪೂರ್ಣವಾಗಿ ಜಖಂ ಆಗಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ಕಾವೂರು ಗಾಂಧಿನಗರದ ಯುವಕರು ಶನಿವಾರ ರಾತ್ರಿ ಮೆಹಂದಿ ಕಾರ್ಯಕ್ರಮ ಮುಗಿಸಿ ವಾಪಸಾಗುತ್ತಿದ್ದರು ಎನ್ನಲಾಗಿದೆ. .ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply