Connect with us

LATEST NEWS

ಪತಿ ಅಗಲಿದ ಕೆಲವೇ ಗಂಟೆಗಳಲ್ಲಿ ಪತ್ನಿ ಸಾವು..ಸಾವಿನಲ್ಲೂ ಒಂದಾದ ಪತಿಪತ್ನಿ

ಮಂಗಳೂರು ಎಪ್ರಿಲ್ 29: ಪತಿ ಸಾವನಪ್ಪಿದ ಕೆಲವೇ ಗಂಟೆಗಳಲ್ಲಿ ಪತ್ನಿಯೂ ಮೃತಪಟ್ಟ ಘಟನೆ ಉಳ್ಳಾಲದ ಮಾಸ್ತಿಕಟ್ಟೆಯಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಕಾಂಗ್ರೆಸ್ ಮುಖಂಡ ನಝೀರ್ ಅಹ್ಮದ್(62) ಮತ್ತು ಅವರ ಪತ್ನಿ ಜಮೀಲಾ(54) ಎಂದ ಮೃತಪಟ್ಟ ದಂಪತಿಯಾಗಿದ್ದಾರೆ.


ನಝೀರ್ ಅಹ್ಮದ್ ಅವರು ನ್ಯೂಮೋನಿಯಾದಿಂದ ಬಳಲುತ್ತಿದ್ದ ಅವರಿಗೆ ನಿನ್ನೆ ರಾತ್ರಿ ತೀವ್ರ ಅಸೌಖ್ಯ ಉಂಟಾಗಿತ್ತು. ಈ ಹಿನ್ನಲೆ ಅವರನ್ನು ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ ದಾರಿಮಧ್ಯೆ ಕೊನೆಯುಸಿರೆಳೆದರು. ನಂತರ ಅವರ ಮೃತದೇಹವನ್ನು ಮನೆಗೆ ತರಲಾಗಿದ್ದು, ಅಂತಿಮ ದರ್ಶನ ಪಡೆದ ನಝೀರ್ ಅಹ್ಮದ್ ಅವರ ಪತ್ನಿ ಜಮೀಲಾ ಅವರು ಪತಿಯ ಅಗಲುವಿಕೆಯಿಂದ ಖಿನ್ನರಾಗಿದ್ದು ಸುಮಾರು 2:30ರ ಸುಮಾರಿಗೆ ಹೃದಯಾಘಾತದಿಂದ ಅವರೂ ಕೊನೆಯುಸಿರೆಳೆದಿದ್ದಾರೆ.
ಮೃತರ ದಫನ ಕಾರ್ಯ ಗುರುವಾರ ಉಳ್ಳಾಲ ದರ್ಗಾ ವಠಾರದ ‘ಮಯ್ಯತ್ ಗಾರ್’ ನಲ್ಲಿ ನೆರವೇರಿತು.