Connect with us

  MANGALORE

  ಸೆಪ್ಟೆಂಬರ್ 29ರಂದು ಉಳ್ಳಾಲ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

  ಮಂಗಳೂರು ಸೆಪ್ಟೆಂಬರ್ 27: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಳ್ಳಾಲ ತಾಲೂಕು ಪಂಚಾಯತ್ ಪುರಸಭೆ ಹಾಗೂ ಕುಣಜಿ ಗ್ರಾಮ ಪಂಚಾಯತ್ ನ ಸಹಯೋಗದಲ್ಲಿ ಉಳ್ಳಾಲ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಸೆಪ್ಟೆಂಬರ್29ರಂದು ಬೆಳಿಗ್ಗೆ 9 ಗಂಟೆಗೆ ನಗರದ ಮಂಗಳೂರು ವಿಶ್ವವಿದ್ಯಾನಿಲಯದ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.


  ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರು ಘನ ಉಪಸ್ಥಿತಿ ಮತ್ತು ಅಧ್ಯಕ್ಷತೆ ವಹಿಸುವರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸುವರು. ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರಾದ ಬಿ. ನಾಗೇಂದ್ರ ಗೌರವ ಉಪಸ್ಥಿತಿಯನ್ನು ವಹಿಸುವರು.

  Share Information
  Advertisement
  Click to comment

  You must be logged in to post a comment Login

  Leave a Reply