LATEST NEWS
ಉಳ್ಳಾಲ – ಸಮುದ್ರಕ್ಕೆ ಇಳಿದ ಇಬ್ಬರು ವಿಧ್ಯಾರ್ಥಿಗಳು ನೀರುಪಾಲು….!!

ಮಂಗಳೂರು ಡಿಸೆಂಬರ್ 09: ಸಮುದ್ರಕ್ಕೆ ಈಜಲು ತೆರಳಿದ ಇಬ್ಬರು ದ್ವಿತೀಯ ಪಿಯುಸಿ ವಿಧ್ಯಾರ್ಥಿಗಳು ಸಮುದ್ರ ಪಾಲಾದ ಘಟನೆ ಉಳ್ಳಾಲದ ಸೋಮೇಶ್ವರದಲ್ಲಿ ನಡೆದಿದೆ.
ಮೃತರನ್ನು ಮಂಜೇಶ್ವರದ ಕುಂಜತ್ತೂರು ಅಡ್ಕ ನಿವಾಸಿ ಶೇಖರ ಎಂಬವರ ಪುತ್ರ ಯೆಶ್ವಿತ್ (18), ಕುಂಜತ್ತೂರು ಮಜಲ್ ನಿವಾಸಿ ಜಯೇಂದ್ರ ಎಂಬವರ ಪುತ್ರ ಯುವರಾಜ್ (18) ಎಂದು ಗುರುತಿಸಲಾಗಿದೆ.

ಶನಿವಾರ ಮಧ್ಯಾಹ್ನ ನಂತರ ಯಶ್ವಿತ್ ಮತ್ತು ಯುವರಾಜ್ ಸೇರಿ ಒಟ್ಟು ಆರು ವಿದ್ಯಾರ್ಥಿಗಳು ಸೋಮನಾಥ ದೇವಸ್ಥಾನದಲ್ಲಿ ಅನ್ನ ಪ್ರಸಾದ ಸ್ವೀಕರಿಸಿ ಸಮೀಪದ ಕಡಲ ಕಿನಾರೆಯಲ್ಲಿ ನೀರಾಟಕ್ಕಿಳಿದಿದ್ದಾರೆ. ಈ ವೇಳೆ ಓರ್ವ ವಿದ್ಯಾರ್ಥಿ ಸಮುದ್ರದ ಅಲೆಗಳ ನಡುವೆ ಸಿಲುಕಿದರೆ, ಇನ್ನೋರ್ವ ವಿದ್ಯಾರ್ಥಿ ಆತನನ್ನು ಹಿಡಿಯಲು ಮುಂದಾಗುತ್ತಿದ್ದಂತೆ ಇಬ್ಬರು ಅಲೆಗಳ ನಡುವೆ ಸಿಲುಕಿ ನಾಪತ್ತೆಯಾಗಿದ್ದಾರೆ. ಸ್ಥಳಕ್ಕೆ ಉಳ್ಳಾಲ ಠಾಣಾಧಿಕಾರಿ ಹೆಚ್.ಎನ್ ಬಾಲಕೃಷ್ಣ ಭೇಟಿ ನೀಡಿದ್ದಾರೆ.