LATEST NEWS
ಉಳ್ಳಾಲ – ಮಾದಕ ವಸ್ತು ಎಂಡಿಎಂಎ ಮಾರಾಟಕ್ಕೆ ಯತ್ನ ಆರೋಪಿ ಅರೆಸ್ಟ್

ಮಂಗಳೂರು ನವೆಂಬರ್ 10: ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಮಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಉಳ್ಳಾಲದ ನಿವಾಸಿ ಮೊಹಮ್ಮದ್ ಇರ್ಷಾದ್ (28) ಎಂದು ಗುರುತಿಸಲಾಗಿದೆ. ಆರೋಪಿ ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತೊಕ್ಕೊಟ್ಟು ಒಳಪೇಟೆಯ ಭಟ್ರಗುಡ್ಡೆ ಎಂಬಲ್ಲಿ ಓರ್ವ ವ್ಯಕ್ತಿ ಅಕ್ರಮವಾಗಿ MDMA ಎಂಬ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾನೆಂದು ಬಂದ ಖಚಿತ ಮಾಹಿತಿ ಮೇರೆಗೆ ಸದ್ರಿ ಸ್ಥಳಕ್ಕೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಆರೋಪಿಯನ್ನು ದಸ್ತಗಿರಿ ಮಾಡಿದ್ದು, ಆರೋಪಿತನಿಂದ 70 ಸಾವಿರ ರೂ ಮೌಲ್ಯದ 12 ಗ್ರಾಂ ನಿಷೇಧಿತ MDMA ಮಾದಕ ವಸ್ತು, ಡಿಜಿಟಲ್ ತೂಕ ಮಾಪನ, ಹಾಗೂ ಮೊಬೈಲ್ ಫೋನ್ ನ್ನು ವಶಪಡಿಸಿಕೊಂಡಿರುತ್ತಾರೆ
