LATEST NEWS
ಉಳ್ಳಾಲ- ಇಂಜಿನಿಯರಿಂಗ್ ಕಾಲೇಜಿನಿಂದ ವಿಧ್ಯಾರ್ಥಿಯನ್ನು ವಶಕ್ಕೆ ಪಡೆದ ಎನ್ಐಎ

ಉಳ್ಳಾಲ ಜನವರಿ 05: ಮಂಗಳೂರಿನ ಕಾಣಾಜೆ ನಡುಪದವು ಪಿಎ ಇಂಜಿನಿಯರಿಂಗ್ ಕಾಲೇಜಿಗೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿ ವಿಧ್ಯಾರ್ಥಿಯನ್ನು ಬಂಧಿಸಿ ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ. ಮೆಕ್ಯಾನಿಕಲ್ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿ ಉಡುಪಿ ಮೂಲದ ರಿಹಾನ್ ಶೇಖ್ ಎಂಬಾತ ಇದೀಗ ಎನ್‌ಐಎ ಅಧಿಕಾರಿಗಳ ವಶದಲ್ಲಿದ್ದಾನೆ.
ಈತ ಶಿವಮೊಗ್ಗದ ಪುರಲೆ ಸಮೀಪದ ತುಂಗಾ ನದಿ ತೀರದಲ್ಲಿ ಪ್ರಾಯೋಗಿಕವಾಗಿ ಸ್ಪೋಟಕವನ್ನು ಸ್ಪೋಟಿಸುತ್ತಿದ್ದ ಪ್ರಕರಣದಲ್ಲಿ ಐಸಿಸ್ ಉಗ್ರ ಸಂಘಟನೆ ಜತೆಗೆ ಸಂಪರ್ಕ ಹೊಂದಿದ್ದರೆನ್ನಲಾದ ಬಂಧಿತ ಶಂಕಿತ ಉಗ್ರರಾದ ಮಾಝ್ ಮುನೀರ್ ಎಂಬಾತನ ಜೊತೆಗೆ ನಿರಂತರ ಸಂಪರ್ಕ ಹಾಗೂ ವಿವಿಧ ಚಟುವಟಿಕೆಗಳಲ್ಲಿ ಜತೆಯಾಗಿ ಭಾಗಿಯಾಗಿದ್ದರೆಂಬ ವಿಚಾರದಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.
