Connect with us

    LATEST NEWS

    ಉಳ್ಳಾಲ – ಪತ್ನಿ ಕೊಂದು ನೇಣಿಗೆ ಶರಣಾದ ಪತಿ…..!!

    ಉಳ್ಳಾಲ ಅಕ್ಟೋಬರ್ 27: ಸಂಶಯ ಸ್ವಭಾವದ ವ್ಯಕ್ತಿಯೊಬ್ಬ ಪತ್ನಿಯನ್ನು ಕೊಂದು ತಾನು ನೇಣಿಗೆ ಶರಣಾದ ಘಟನೆ ಉಳ್ಳಾಲ ಪೊಲೀಸ್‌ ಠಾಣಾ ವ್ಯಾಪ್ತಿಯ ಪಿಲಾರು ಎಂಬಲ್ಲಿ ನಡೆದಿದೆ.


    ಪತ್ನಿ ಶೋಭಾ ಪೂಜಾರಿ ಅವರ ಮೃತದೇಹ ಮನೆಯ ಕೋಣೆಯಲ್ಲಿ ಪತ್ತೆಯಾದರೆ, ಪಿಲಾರು ನಿವಾಸಿ ಶಿವಾನಂದ ಪೂಜಾರಿ (55) ಮೃತದೇಹ ತೋಟದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

    ಇಂದು ಶೋಭಾ ಅವರ ಮಗ ಕಾರ್ತಿಕ್‌ ತಾಯಿಗೆ ಕರೆ ಮಾಡಿದಾಗ, ಸ್ವೀಕರಿಸದ ಹಿನ್ನೆಲೆಯಲ್ಲಿ ಪಕ್ಕದ ಮನೆಯವರ ಹತ್ತಿರ ವಿಚಾರಿಸಿದ್ದಾರೆ. ಪಕ್ಕದ ಮನೆಯವರು ಮನೆಯೊಳಗೆ ಬಂದಾಗ ಶೋಭಾ ಮೃತದೇಹ ಪತ್ತೆಯಾಗಿದೆ. ಸ್ವಲ್ಪ ಹೊತ್ತಿನಲ್ಲಿ ಶಿವಾನಂದ ಪೂಜಾರಿ ಮೃತದೇಹ ಸಮೀಪದ ತೋಟದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply