Connect with us

    DAKSHINA KANNADA

    ಉಳ್ಳಾಲ ನಾಟೆಕಲ್ ಬೈಕ್ ಅಪಘಾತ : ಗಂಭೀರ ಗಾಯಗೊಂಡ ಯುವಕನೂ ಮೃತ್ಯು..!

    ಉಳ್ಳಾಲ : ಮಂಗಳೂರು ಹೊರವಲಯದ ಉಳ್ಳಾಲ ನಾಟೆಕಲ್ ಸಮೀಪ ನಡೆದ ಬೈಕ್ ಅಪಘಾತದಲ್ಲಿ ಬೈಕ್ ಚಲಾಯಿಸುತ್ತಿದ್ದ ಯುವಕನೂ ಮೃತಪಟ್ಟಿದ್ದಾನೆ. ಬೈಕ್ ಸವಾರ ಯತೀಶ್ ದೇವಾಡಿಗ ಮೃತ ಯುವಕನಾಗಿದ್ದಾನೆ ಹಾಗೂ ಸಹಸವಾರ ಮಹಿಳೆ ಶ್ರೀ ನಿಧಿ ಈಗಾಗಲೇ ಮೃತಪಟ್ಟಿದ್ದು ಗಂಭೀರ ಗಾಯಗೊಂಡಿದ್ದ ಸವಾರ ಯತೀಶ್  ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

     

    ಹಳೆಯಂಗಡಿ ತೋಕೂರು ಬಸ್ ನಿಲ್ದಾಣ ಬಳಿಯ ನಿವಾಸಿ  ಶ್ರೀನಿಧಿ  ಹಾಗೂ ಯತೀಶ್ ದೇವಾಡಿಗ ಮುಡಿಪುವಿನಲ್ಲಿ ಸಂಬಂಧಿಕರೊಬ್ಬರ ಗೃಹಪ್ರವೇಶದಲ್ಲಿ ಭಾಗವಹಿಸಿ ಭಾನುವಾರ ರಾತ್ರಿ ವಾಪಸ್ಸಾಗುತ್ತಿದ್ದರು. ನಾಟೆಕಲ್ ಗ್ರೀನ್ ಗ್ರೌಂಡ್ ಸಮೀಪ ಬೈಕ್‌ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿತ್ತು. ನಿಧಿ ಭಾನುವಾರವೇ ಮೃತಪಟ್ಡಿದ್ದರೆ, ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯತೀಶ್ ಇಂದು ಸೋಮವಾರ ಕೊನೆಯುಸಿರೆಳೆದ್ದಿದ್ದಾರೆ. ನಿಧಿ ಅವರಿಗೆ ಇಬ್ಬರು ಪುಟಾಣಿ ಮಕ್ಕಳಿದ್ದು ತೋಕೂರಿನ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಯತೀಶ್ ದೇವಾಡಿಗ ಪೋಷಕರಿಗೆ ಒಬ್ಬನೇ ಮಗನಾಗಿದ್ದ. ಮಂಗಳೂರು ದಕ್ಷಿಣ ಸಂಚಾರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply