Connect with us

    LATEST NEWS

    ಉಳ್ಳಾಲ – ರಸ್ತೆ ತಡೆಗೆ ಗುದ್ದಿದ ಓಮ್ನಿ ಕಾರು ವೃದ್ದೆ ಸಾವು…!!

    ಉಳ್ಳಾಲ, ಮೇ 21 : ಹೆದ್ದಾರಿ ಬದಿಯ ಕಬ್ಬಿಣದ ಸಲಾಕೆಯ ತಡೆಬೇಲಿಗೆ ಓಮ್ನಿ‌ ಕಾರು ಡಿಕ್ಕಿ ಹೊಡೆದ ಪರಿಣಾಮ 85ರ ವೃದ್ಧೆಯೋರ್ವರು ಸಾವನಪ್ಪಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ರಾ.ಹೆ. 66 ರ ಉಚ್ಚಿಲ ಎಂಬಲ್ಲಿ ನಸುಕಿನ ಜಾವ ಸಂಭವಿಸಿದೆ.


    ಮೃತರನ್ನು ಕಾಸರಗೋಡು ಜಿಲ್ಲೆಯ ಮಂಜೇಶ್ವರ , ಕುಂಜತ್ತೂರು ನಿವಾಸಿ ಬಿ.ಫಾತಿಮಾ(85) ಎಂದು ಗುರುತಿಸಲಾಗಿದ್ದು, ಇವರು ತನ್ನ ಮಗ ಮೂಸ(50), ಮೊಮ್ಮಗ ಮಸ್ತಫಾ(24) ಜೊತೆ ನಿನ್ನೆ ಸಂಜೆ ಮಂಗಳೂರಿನ ಅಡ್ಡೂರಿಗೆ ತೆರಳಿ ಸಂಬಂಧಿಕರೋರ್ವರ ಶವಸಂಸ್ಕಾರದಲ್ಲಿ ಪಾಲ್ಗೊಂಡು ಹಿಂತಿರುಗುತ್ತಿದ್ದ ವೇಳೆ ಇಂದು ಮುಂಜಾನೆ 2 ಗಂಟೆ ಸುಮಾರಿಗೆ ಘಟನೆ ಸಂಭವಿಸಿದೆ. ನಿದ್ರೆ ಮಂಪರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ತಡೆಬೇಲಿಗೆ ಕಾರು ಢಿಕ್ಕಿ ಹೊಡೆದಿದೆ ಎನ್ನಲಾಗುತ್ತಿದೆ.

    ಘಟನೆಯನ್ನ ಕಂಡ ವಾಹನ ಸವಾರರೊಬ್ಬರು ತಲಪಾಡಿಯಲ್ಲಿ ಗಸ್ತಿನಲ್ಲಿದ್ದ ಟ್ರಾಫಿಕ್ ಪೊಲೀಸರಲ್ಲಿ ವಿಚಾರ ತಿಳಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಟ್ರಾಫಿಕ್ ಸಿಬ್ಬಂದಿಗಳಾದ ಮಹೇಶ್ ಆಚಾರ್ಯ ಮತ್ತು ವಿಠ್ಠಲ್ ದಾಸ್ ಅವರು ಕಬ್ಬಿಣದ ಸಲಾಕೆಯೆಡೆಯಲ್ಲಿ ಸಿಲುಕಿ ಛಿಧ್ರಗೊಂಡಿದ್ದ ಫಾತಿಮಾರನ್ನ ಹೊರಗೆಳೆದು ರಕ್ತದ ಮಡುವಲ್ಲಿದ್ದ ಮೂವರನ್ನ ತಮ್ಮ ಇಲಾಖಾ ವಾಹನದಲ್ಲಿ ತುಂಬಿಸಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply