Connect with us

  DAKSHINA KANNADA

  ಉಳ್ಳಾಲ ಖಾಝಿ ಅಸ್ಸೈಯದ್ ಫಝಲ್ ಕೋಯಮ್ಮ ತಂಙಳ್ ನಿಧನ

  ಮಂಗಳೂರು, ಜುಲೈ 08: ಉಳ್ಳಾಲ ಖಾಝಿ ಅಸ್ಸೈಯದ್ ಫಝಲ್ ಕೋಯಮ್ಮ ತಂಙಳ್ ನಿಧನರಾಗಿದ್ದಾರೆ. ಕೇರಳದ ಎಟ್ಟಿಕುಳಂನಲ್ಲಿರುವ ಮನೆಯಲ್ಲಿ ಅವರು ಅನಾರೋಗ್ಯಕ್ಕೀಡಾಗಿದ್ದು, ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

  ಕೇರಳದ ಕಣ್ಣೂರು ಜಿಲ್ಲೆಯ ಎಟ್ಟಿಕ್ಕುಳಂನಲ್ಲಿರುವ ಮನೆಯಲ್ಲಿ ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಹೃದಯ ಸ್ತಂಭನದಿಂದ ತಂಙಳ್ ಕೊನೆಯುಸಿರೆಳೆದರೆಂದು ತಿಳಿದುಬಂದಿದೆ.

  ಇಂದು ಅಪರಾಹ್ನ ಉಳ್ಳಾಲ ಸೈಯದ್ ಮದನಿ ದರ್ಗಾ ವಠಾರದಲ್ಲಿ ನಿಗದಿಯಾಗಿದ್ದ ಸೈಯದ್ ಮದನಿ ಶರೀಅತ್ ಕಾಲೇಜು ವಿದ್ಯಾರ್ಥಿಗಳ ನೂತನ ಹಾಸ್ಟೆಲ್ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರು ಬೆಳಗ್ಗೆ ಎಟ್ಟಿಕ್ಕುಳಂನಲ್ಲಿರುವ ಮನೆಯಲ್ಲಿ ಸಿದ್ಧರಾಗುತ್ತಿದ್ದರು. ಈ ವೇಳೆ ಹೃದಯ ಸ್ತಂಭನ ಆಗಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

  ಇಂದು ಅಪರಾಹ್ನ 2 ಗಂಟೆಯ ವರೆಗೆ ಎಟ್ಟುಕ್ಕುಳಂನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಬಳಿಕ ಪಾರ್ಥಿವ ಶರೀರವನ್ನು ಉಳ್ಳಾಲ ಜುಮಾ ಮಸೀದಿ ಮತ್ತು ಸೈಯದ್ ಮದನಿ ದರ್ಗಾ ವಠಾರಕ್ಕೆ ತರಲಾಗುತ್ತದೆ. ಅಲ್ಲಿ ಸಂಜೆ 5 ಗಂಟೆಯ ವರೆಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ಇರಲಿದೆ. ಆ ಬಳಿಕ ಕಡಬ ತಾಲೂಕಿನ ಕೂರತ್ ಗೆ ಕೊಂಡೊಯ್ಯಲಾಗುತ್ತದೆ. ಅಲ್ಲಿ ದಫನ ಕಾರ್ಯ ನೆರವೇರಲಿದೆ.

  ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಕೇಂದ್ರ ಮುಶಾವರ ಸದಸ್ಯ, ಕಾಸರಗೋಡು ದೇಳಿಯ ಜಾಮಿಯ ಸಅದಿಯ್ಯ ಇದರ ಪ್ರಧಾನ ಕಾರ್ಯದರ್ಶಿಯಾಗಿದ್ದ ಕೂರತ್ ತಂಙಳ್ ಅವರು 2014ರಲ್ಲಿ ತಾಜುಲ್ ಉಲಮಾ ನಿಧನರಾದ ಬಳಿಕ ಉಳ್ಳಾಲ ಖಾಝಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.

  ಸಯ್ಯದ್ ಕೂರತ್ ತಂಞಳ್ ಅವರ ಅಂತ್ಯ ಸಂಸ್ಕಾರ ವಿವರ

  ಅಪರಾಹ್ನ 2 ಗಂಟೆಯವರೆಗೆ ಎಟ್ಟುಕ್ಕುಳಂನಲ್ಲಿ ಅಂತಿಮ ದರ್ಶನ

  ಬಳಿಕ ಪಾರ್ಥಿವ ಶರೀರವನ್ನು ಸಂಜೆ 7 ಗಂಟೆಗೆ ಉಳ್ಳಾಲ ಜುಮಾ ಮಸೀದಿ ಮತ್ತು ಸೈಯದ್ ಮದನಿ ದರ್ಗಾ ವಠಾರದಲ್ಲಿ ಸಾವ೯ಜನಿಕ ದಶ೯ನ.

  ರಾತ್ರಿ 9 ಗಂಟೆಗೆ ಕೂರತ್ ನಲ್ಲಿ ಅಂತ್ಯ ಸಂಸ್ಕಾರ

  ಬಿ.ಎ. ಅಬ್ದುಲ್ ನಾಸೀರ್ ಲಕ್ಕಿಸ್ಟಾರ್
  ಅಧ್ಯಕ್ಷರು
  ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿ

  Share Information
  Advertisement
  Click to comment

  You must be logged in to post a comment Login

  Leave a Reply