Connect with us

LATEST NEWS

ಉಳ್ಳಾಲ ಠಾಣೆ ಎಸ್ಐಗೆ ಕೊರೊನಾ ಪಾಸಿಟಿವ್

ಮಂಗಳೂರು ಜೂನ್ 24: ಉಳ್ಳಾಲ ಠಾಣೆ ಎಸ್ಐಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಈ ಹಿನ್ನಲೆ ಮಂಗಳೂರು ಹೊರವಲಯದ ಉಳ್ಳಾಲ ಠಾಣೆಯನ್ನು ಸೀಲ್ ಡೌನ್ ಮಾಡಲಾಗುತ್ತಿದೆ.


ಈಗಾಗಲೇ ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಏರಿಕೆಯಲ್ಲಿರುವುದಲ್ಲದೇ, ರಾಜ್ಯದಲ್ಲಿ ಪೊಲೀಸ್ ಸಿಬ್ಬಂದಿಗಳಿಗೂ ಕೊರೊನಾ ಸೋಂಕು ತಗುಲುತ್ತಿದೆ. ಈಗ ದಕ್ಷಿಣಕನ್ನಡ ಜಿಲ್ಲೆಯಲ್ಲೂ ಪೊಲೀಸ್ ಸಿಬ್ಬಂದಿಗಳಿಗೆ ಕೊರೊನಾ ಸೋಂಕು ತಗುಲಿದ್ದು ಆತಂಕಕ್ಕೆ ಕಾರಣವಾಗಿದೆ. ಸದ್ಯ ಉಳ್ಳಾಲ ಪೊಲೀಸ್ ಠಾಣೆಯನ್ನು  ಪೊಲೀಸರು ಸೀಲ್ ಡೌನ್ ಮಾಡುತ್ತಿದ್ದಾರೆ.


ಇಂದು ಬೆಳಿಗ್ಗೆಯಷ್ಟೇ ಕೊರೊನಾದಿಂದ ಉಳ್ಳಾಲದ ಮಹಿಳೆಯೊಬ್ಬರು ಸಾವನಪ್ಪಿದ್ದರು. ಉಳ್ಳಾಲ ಅಝಾದ್ ನಗರದ 57ವರ್ಷದ ಮಹಿಳೆಯನ್ನು ಬೇಧಿಯ ಕಾರಣದಿಂದ ತೊಕ್ಕೊಟ್ಟು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು  8ದಿನಗಳ ಕಾಲ ಚಿಕಿತ್ಸೆ ಪಡೆದಿದ್ದರು. ಬಳಿಕ ಸೋಮವಾರ ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈ ವೇಳೆ ಅವರ ಗಂಟಲ ದ್ರವ ಪರೀಕ್ಷೆಗೆ ಒಳಪಡಿಸಲಾಗಿದ್ದು ವರದಿ ಕೊರೊನಾ ಪಾಸಿಟಿವ್ ಬಂದಿತ್ತು. ಅವರು ಬುಧವಾರ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

Facebook Comments

comments