LATEST NEWS
ಉಳ್ಳಾಲ – ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವಕ

ಉಳ್ಳಾಲ ಸೆಪ್ಟೆಂಬರ್ 05: ಯುವಕನೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ತಲಪಾಡಿಯ ನಾರ್ಲಾದಲ್ಲಿ ನಡೆದಿದೆ.
ಮೃತ ಯುವಕನನ್ನು ತಲಪಾಡಿ ಗ್ರಾಮದ ನಾರ್ಲ ಪದವು ನಿವಾಸಿ ಪೈಝಲ್(24) ಎಂದು ಗುರುತಿಸಲಾಗಿದ್ದು. ಫೈಝಲ್ ಇಂದು ಬೆಳಗ್ಗೆ ತನ್ನ ಮನೆಯ ಮೊದಲ ಅಂತಸ್ತಿನ ಕೊಠಡಿಯ ಫ್ಯಾನಿಗೆ ನೈಲಾನ್ ಬಟ್ಟೆಯಿಂದ ಕುಣಿಕೆ ಬಿಗಿದು ಆತ್ಮಹತ್ಯೆಗೈದಿದ್ದಾನೆ. ಮನೆಯಲ್ಲಿ ಫೈಸಲ್ ತಾಯಿ, ತಂಗಿ ಮತ್ತು ಅಜ್ಜಿ ಇದ್ದು ತಾಯಿ ಮನೆಯ ಮೇಲಿನ ಅಂತಸ್ತಿಗೆ ತೆರಳಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಗೈದಿರುವುದಾಗಿ ತಿಳಿದುಬಂದಿದೆ.
