LATEST NEWS
ಉಳ್ಳಾಲ – ರೈಲು ಹಳಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ ಶರಣು….!!
ಉಳ್ಳಾಲ ಸೆಪ್ಟೆಂಬರ್ 25: ರೈಲಿನಡಿಗೆ ಬಿದ್ದು ಅವಿವಾಹಿತ ಯುವಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಉಚ್ಚಿಲ ರೈಲ್ವೇ ಗೇಟ್ ಬಳಿ ನಡೆದಿದೆ.
ಮೃತರನ್ನು ಮಂಗಳೂರು ಕೊಂಚಾಡಿ ನಿವಾಸಿ ಪ್ರಶಾಂತ್ (44) ಎಂದು ಗುರುತಿಸಲಾಗಿದೆ.ನವೆಂಬರ್ 24 ರಂದು ಮನೆಯಿಂದ ಹೊರಟಿದ್ದ ಪ್ರಶಾಂತ್ ಆಕ್ಟಿವಾ ಸ್ಕೂಟರನ್ನು ಉಳ್ಳಾಲ ರೈಲ್ವೇ ನಿಲ್ದಾಣದಲ್ಲಿರಿಸಿ,ಉಚ್ಚಿಲ ರೈಲ್ವೇ ಗೇಟ್ ವರೆಗೆ ನಡೆದುಕೊಂಡು ತೆರಳಿ ಅಲ್ಲಿ ರೈಲ್ವೇ ಹಳಿಯಲ್ಲಿ ತಲೆಯಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವಿವಾಹಿತ ರಾಗಿದ್ದ ಪ್ರಶಾಂತ್ ಅವರಿಗೆ ಯಾವುದೇ ಸಮಸ್ಯೆಗಳಿರಲಿಲ್ಲ. ಕುಡಿದು ಕೃತ್ಯವನ್ನು ಎಸಗಿರುವುದಾಗಿ ವೈದ್ಯಕೀಯ ವರದಿಯಿಂದ ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಮಂಗಳೂರು ರೈಲ್ವೇ ಪೊಲೀಸ್ ಠಾಣೆಯ ಎಎಸ್ ಐ ಮಧುಚಂದ್ರ ನೇತೃತ್ವದಲ್ಲಿ ಪೊಲೀಸ್ ತಂಡ ಭೇಟಿ ನೀಡಿ ಪ್ರಕರಣ ದಾಖಲಿಸಿದೆ.
You must be logged in to post a comment Login