Connect with us

    LATEST NEWS

    ಉಳ್ಳಾಲ – ಮದುವೆ ವೇಳೆ ಪೊಲೀಸರೊಂದಿಗೆ ಮದುಮಗನ ಮಾಜಿ ಪ್ರೇಯಸಿ ಎಂಟ್ರಿ – ಹೈಡ್ರಾಮಕ್ಕೆ ಸಾಕ್ಷಿಯಾದ ಮದುವೆ ಮನೆ

    ಮಂಗಳೂರು ಜನವರಿ 05: ಮದುವೆಯ ವೇಳೆ ಮದುಮಗನ ಮಾಜಿ ಪ್ರೇಯಸಿ ಪೊಲೀಸರೊಂದಿಗೆ ಎಂಟ್ರಿ ಕೊಟ್ಟು ಹೈಡ್ರಾಮಾ ಕ್ರಿಯೆಟ್ ಮಾಡಿದ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆ ಉಳ್ಳಾಲ ತಾಲೂಕಿನ ಬೀರಿ ಬಳಿ ನಡೆದಿದೆ.


    ಕೇರಳ ಮೂಲದ ಅಕ್ಷಯ್ ಎಂಬಾತನ ಮದುವೆ ಮಂಗಳೂರು ಮೂಲದ ಯುವತಿ ಜೊತೆ ನಡೆಯುತ್ತಿದ್ದಾಗ ಮೈಸೂರು ಮೂಲದ ಮಾಜಿ ಪ್ರೇಯಸಿ ಕಲ್ಯಾಣ ಮಂಟಪಕ್ಕೆ ಎಂಟ್ರಿಕೊಟ್ಟು ಹೈಡ್ರಾಮ ನಡೆಸಿದ್ದಾಳೆ. ಕೇರಳದ ಕೊಝಿಕ್ಕೋಡ್ ಮೂಲದ ಅಕ್ಷಯ್ ಎಂಬಾತ ಒಂದೂವರೆ ವರ್ಷದ ಹಿಂದೆ ಮೈಸೂರಿನ ಯುವತಿಯನ್ನು ಶಾದಿ ಡಾಟ್ ಕಾಮ್ ಮೂಲಕ ಪರಿಚಯ ಮಾಡಿಕೊಂಡಿದ್ದನು. ನಂತರ ವಿವಾಹವಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿದ್ದಾನೆ. ನಂತರ ವರಸೆ ಬದಲಾಯಿಸಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ. ಈ ನಡುವೆ ಯುವತಿ ಡಿಸೆಂಬರ್ 26 ರಂದು ಅಕ್ಷಯ್ ವಿರುದ್ಧ ಕೇರಳದ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರದ ದೂರು ದಾಖಲಿಸಿದ್ದಾಳೆ.


    ಇನ್ನು ಪ್ರಕರಣ ಸಂಬಂಧ ಅರೋಪಿ ಅಕ್ಷಯ್​ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯವು ವಜಾಗೊಳಿಸಿತ್ತು. ಈ ನಡುವೆ ಮಂಗಳೂರನ ಯುವತಿ ಜೊತೆ ಅಕ್ಷಯ್​ಗೆ ವಿವಾಹ ನಿಶ್ಚಯವಾಗಿದೆ. ಕರ್ನಾಟಕದ-ಕೇರಳ ಗಡಿಭಾಗ ಬೀರಿಯ ಖಾಸಗಿ ಹಾಲ್​ನಲ್ಲಿ ಮದುವೆ ನಡೆಯುತ್ತಿರುವ ವಿಚಾರ ತಿಳಿದು ಉಳ್ಳಾಲ ಪೊಲೀಸರೊಂದಿಗೆ ಆಗಮಿಸಿ ಹಾಲ್​ ಮುಂಭಾಗದಲ್ಲಿ ಹೈಡ್ರಾಮ ನಡೆಸಿದ್ದಾಳೆ.


    ನಂತರ ಪೊಲೀಸರೇ ಆಕೆಯನ್ನು ಹಾಲ್ ಬಳಿಯಿಂದ ಕೇರಳದ ಮಂಜೇಶ್ವರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋದರು. ಆರೋಪಿಯನ್ನು ಅರೆಸ್ಟ್ ಮಾಡಿ ಅಂದರೆ ನನ್ನನ್ನೇ ಕರೆದುಕೊಂಡು ಹೋಗುತ್ತಿದ್ದಾರೆ ಎಂದು ಯುವತಿ ಆಕ್ರೋಶ ಹೊರಹಾಕಿದ್ದಾಳೆ. ನಂತರ ಅಕ್ಷಯ್ ಮಂಗಳೂರು ಯುವತಿಗೆ ತಾಳಿ ಕಟ್ಟಿದ್ದಾನೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *