LATEST NEWS
ಮಟ ಮಟ ಮಧ್ಯಾಹ್ನವೇ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಕೆಸಿ ರೋಡ್ ಶಾಖೆಯಲ್ಲಿ ಗನ್ ಪಾಯಿಂಟ್ ನಲ್ಲಿ ದರೋಡೆ
ಮಂಗಳೂರು ಜನವರಿ 17: ಬೀದರ್ ನಲ್ಲಿ ನಿನ್ನೆಯಷ್ಟೇ ನಡೆದ ಎಟಿಎಂ ವ್ಯಾನ್ ದರೋಡೆ ಪ್ರಕರಣದ ನಡುವೆ ಇದೀಗ ಮಂಗಳೂರಿನಲ್ಲೂ ಬ್ಯಾಂಕ್ ದರೋಡೆ ನಡೆದಿದೆ.
ಕೆ.ಸಿ ರೋಡ್ ಜಂಕ್ಷನ್ ನಲ್ಲಿರುವ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಶಾಖೆಯಿಂದ ದರೋಡೆ ನಡೆದಿದೆ. ಬ್ಯಾಂಕ್ ಶಾಖೆಗೆ ನುಗ್ಗಿದ ಐವರು ಮಸೂಕುಧಾರಿಗಳು ಒಳಗಿದ್ದ ಐವರು ಸಿಬ್ಬಂದಿಗಳಿಗೆ ಬಂದೂಕು, ತಲ್ವಾರ್ ತೋರಿಸಿ ದರೋಡೆ ನಡೆಸಿದ್ದಾರೆ.
ಕಾರಿನಲ್ಲಿ ಬಂದ ಐವರು ದರೋಡೆಕೋರರು ಶಾಖಾ ಕಚೇರಿಗೆ ನುಗ್ಗಿ ಬಂದೂಕು ತೋರಿಸಿ ಸಿಬ್ಬಂದಿಯನ್ನು ಬೆದರಿಸಿದ್ದಾರೆ. ಈ ವೇಳೆ ಕೆಲಸದಲ್ಲಿ ನಿರತರಾಗಿದ್ದ ಮಹಿಳಾ ಸಿಬ್ಬಂದಿ ಬೊಬ್ಬೆ ಹೊಡೆಯಲು ಮುಂದಾದಾಗ ಅವರನ್ನು ಹೆದರಿಸಿದ ದರೋಡೆ ಕೋರರು ನಗ ನಗದು ದೋಚಿ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಎಸಿಪಿ ಧನ್ಯಾ ಇನ್ ಸ್ಪೆಕ್ಟರ್, ಬಾಲಕೃಷ್ಣ ನೇತೃತ್ವದ ಪೊಲೀಸರ ತಂಡ ತೆರಳಿ ಪರಿಶೀಲನೆ ನಡೆಸಿದ್ದು, ತನಿಖೆ ನಡೆಸುತ್ತಿದ್ದಾರೆ.