DAKSHINA KANNADA
ಉಳ್ಳಾಲ: SSLC ಪರೀಕ್ಷಾ ಕೊಠಡಿಯಲ್ಲಿ ಬೆಂಕಿ ಅವಘಡ

ಉಳ್ಳಾಲ, ಜುಲೈ 19: SSLC ಪರೀಕ್ಷೆ ಆರಂಭವಾದ ಮೊದಲ ದಿನ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಅವಘಡವೊಂದು ಸಂಭವಿಸಿದೆ. ಪರೀಕ್ಷೆ ನಡೆಯುತ್ತಿದ್ದ ಕೊಠಡಿಗೆ ಬೆಂಕಿ ತಗುಲಿದ ಘಟನೆ ಉಳ್ಳಾಲ ಸಮೀಪದ ಬಬ್ಬುಕಟ್ಟೆಯಲ್ಲಿ ನಡೆದಿದೆ.
ಬಬ್ಬುಕಟ್ಟೆ ಖಾಸಗಿ ಶಾಲೆಯ ಲ್ಯಾಬ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪಕ್ಕದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯುತ್ತಿದ್ದ ಕೊಠಡಿಗೂ ತಗುಲಿದೆ. ಈ ವೇಳೆ ತಕ್ಷಣ ಪರೀಕ್ಷಾ ಕೇಂದ್ರದ ಸಿಬ್ಬಂದಿ ವಿದ್ಯಾರ್ಥಿಗಳನ್ನು ಇನ್ನೊಂದು ಕಟ್ಟಡಕ್ಕೆ ಸ್ಥಳಾಂತರ ಮಾಡಿದ್ದಾರೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ತಗುಲಿರಬಹುದೆಂದು ಶಂಕಿಸಲಾಗಿದೆ. ಉಳ್ಳಾಲ ಠಾಣಾ ಪೊಲೀಸರು ಮತ್ತು ಅಗ್ನಿ ಶಾಮಕದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.