DAKSHINA KANNADA
ಉಳ್ಳಾಲ: ಸೋಮನಾಥ ಕ್ಷೇತ್ರಕ್ಕೆ ರಾಜ್ಯಪಾಲ ಗೆಹ್ಲೋಟ್ ಭೇಟಿ

ಉಳ್ಳಾಲ, ಮಾರ್ಚ್ 16: ಮಂಗಳೂರು ಪ್ರವಾಸದಲ್ಲಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪುರಾಣ ಪ್ರಸಿದ್ಧ ಸೋಮೇಶ್ವರ ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಬುಧವಾರದಂದು ಭೇಟಿ ನೀಡಿದರು.
ಸೋಮನಾಥೇಶ್ವರ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಬಿ.ರವೀಂದ್ರನಾಥ ರೈ ಅವರು ರಾಜ್ಯಪಾಲರನ್ನು ಬರಮಾಡಿಕೊಂಡರು. ಈ ಸಂದರ್ಭ ಸೋಮೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ರಾಜ್ಯಪಾಲರು ಬಿಡುಗಡೆಗೊಳಿಸಿದರು.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಮ್.ಆರ್, ಮಂಗಳೂರು ಪೊಲೀಸ್ ಆಯುಕ್ತರಾದ ಕುಲದೀಪ್ ಕುಮಾರ್ ಜೈನ್, ದೇವಸ್ಥಾನದ ಕಾರ್ಯ ನಿರ್ವಾಹಣಾಧಿಕಾರಿ ಶ್ವೇತ ಪಳ್ಳಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಭಗವತೀಶ್ ಅಡ್ಕ, ವಸಂತ್ ಉಳ್ಳಾಲ್, ಯು.ಸದಾನಂದ ಬಂಗೇರ, ಪವಿತ್ರ ಕುಮಾರ್ ಗಟ್ಟಿ, ಹರಿಣಾಕ್ಷಿ ಕೊಲ್ಯ, ಮಾಧವಿ ಉಳ್ಳಾಲ್, ಪ್ರದಾನ ಅರ್ಚಕರಾದ ಸೂರ್ಯನಾರಾಯಣ ಹೊಳ್ಳ ಮೊದಲಾದವರು ಉಪಸ್ಥಿತರಿದ್ದರು.