Connect with us

    DAKSHINA KANNADA

    ಉಳ್ಳಾಲ: ಮಳಿಗೆಯ ಮಾಲಕ ಅಂಗಡಿಯೊಳಗೆ ನೇಣಿಗೆ ಶರಣು

    ಉಳ್ಳಾಲ, ಏಪ್ರಿಲ್ 10 : ನಗರದ ತೊಕ್ಕೊಟ್ಟು ಜಂಕ್ಷನ್‌‌ನಲ್ಲಿರುವ ಥ್ರೆಡ್ ಹೌಸ್ ಮಳಿಗೆಯ ಮಾಲಕ ಅಂಗಡಿಯೊಳಗೆ ನೇಣು ಬಿಗಿದು ಆತ್ಮಹತ್ಯೆ ಘಟನೆ ಸೋಮವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

    ಮೂಲತ ಸೇವಂತಿಗುಡ್ಡೆ ನಿವಾಸಿಯಾಗಿದ್ದ ಪ್ರಸ್ತುತ ಕನೀರುತೋಟದಲ್ಲಿ ವಾಸಿಸುತ್ತಿರುವ ಪ್ರವೀಣ್ ಆಳ್ವ (45) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

    ತೊಕ್ಕೊಟ್ಟು ಜಂಕ್ಷನ್ ಬಳಿ ಹೊಲಿಗೆ ನೂಲು ಸೇರಿದಂತೆ ಟೈಲರ್ ಅಂಗಡಿಗಳಿಗೆ ಹೊಲಿಗೆ ಸಂಬಂಧಿಸಿದ ಕಚ್ಚಾ ವಸ್ತುಗಳನ್ನು ಪೂರೈಸುವ ಥ್ರೆಡ್ ಹೌಸ್ ಅಂಗಡಿಯನ್ಬು ಕಳೆದ ಏಳೆಂಟು ವರ್ಷಗಳಿಂದ ನಡೆಸುತ್ತಿದ್ದರು. ಆರ್ಥಿಕವಾಗಿ ಸಂಕಷ್ಟದಲ್ಲಿದ್ದ ಅವರು‌ ಬೆಳಗ್ಗೆ 6.30ಕ್ಕೆ ಮನೆಯಿಂದ ಹೊರಟಿದ್ದು, ಅಂಗಡಿಯೊಳಗೆ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ.

    ಅವರು ಆತ್ಮಹತ್ಯೆಗೈದ ಸ್ಥಳದಲ್ಲಿ ಚೀಟಿಯೊಂದರಲ್ಲಿ‌ನನ್ನ ಆತ್ಮಹತ್ಯೆಗೆ ನಾನೇ ಕಾರಣ ಎಂದು ಬರೆದು ಆತ್ಮಹತ್ಯೆಗೈದಿದ್ದಾರೆ. ಮೃತರು ತಾಯಿ, ಪತ್ನಿ ಪುತ್ರನನ್ಬು ಅಗಲಿದ್ದು, ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply