LATEST NEWS
ಮಾನಹಾನಿಕರ ಸುದ್ದಿ ಪ್ರಕಟಿಸದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದ ಮೂಲ್ಕಿ ಮೂಡಬಿದ್ರೆ ಶಾಸಕ ಉಮಾನಾಥ ಕೊಟ್ಯಾನ್

ಮಂಗಳೂರು ಎಪ್ರಿಲ್ 11 : ಬಿಜೆಪಿಯ ಟಿಕೆಟ್ ಘೋಷಣೆಗೆ ಕೆಲವು ಸಮಯಗಳಿರುವ ನಡುವೆಯೇ ಇದೀಗ ಮೂಲ್ಕಿ ಮೂಡಬಿದ್ರೆ ಶಾಸಕರಾಗಿದ್ದ ಉಮಾನಾಥ್ ಕೋಟ್ಯಾನ್ ಅವರು ತನ್ನ ವಿರುದ್ಧ ಯಾವುದೇ ಮಾನಹಾನಿಕಾರಕ ಸುದ್ದಿ ,ಪೊಟೋ , ವಿಡಿಯೊ ಪ್ರಕಟ ಮಾಡದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ.
ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ರಾಜ್ಯದ 40 ಕ್ಕೂ ಹೆಚ್ಚು ಮಾಧ್ಯಮಗಳಲ್ಲಿ ಯಾವುದೇ ಆಕ್ಷೇಪಕಾರಿ ಸುದ್ದಿ ಪ್ರಕಟಿಸದಂತೆ ಉಮನಾಥ ಕೋಟ್ಯಾನ್ ಅವರು ಬೆಂಗಳೂರು ಜೆ.ಎಂ.ಎಫ್.ಸಿ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ.

ಕಾಂಗ್ರೇಸ್ ಹಾಗೂ ಜೆಡಿಎಸ್ ಈಗಾಗಲೇ ತಮ್ಮ ಅಭ್ಯರ್ಥಿಗಳ ಘೋಷಣೆ ಮಾಡಿದ್ದರೂ ಬಿಜೆಪಿ ಮಾತ್ರ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಇನ್ನೂ ಗೊಂದಲದಲ್ಲಿದ್ದು, ಯಾವುದೇ ಕ್ಷಣದಲ್ಲಿ ಬಿಜೆಪಿ ಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಮೂಲ್ಕಿ ಮೂಡಬಿದ್ರೆ ಶಾಸಕ ಉಮಾನಾಥ್ ಕೋಟ್ಯಾನ್ ಅವರು ತನ್ನ ವಿರುದ್ಧ ಯಾವುದೇ ಮಾನಹಾನಿಕಾರಕ ಸುದ್ದಿ ,ಪೊಟೋ , ವಿಡಿಯೊ ಪ್ರಕಟ ಮಾಡದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದು, ಚುನಾವಣಾ ಸಂದರ್ಭದಲ್ಲಿ ಈ ಧಿಡೀರ್ ಬೆಳವಣಿಗೆ ಬಗ್ಗೆ ಸಾರ್ವಜನಿಕ ವಲಯದಲ್ಲಿ ವಿವಿಧ ರೀತಿಯಲ್ಲಿ ಚರ್ಚೆಗಳು ಆರಂಭವಾಗಿದೆ.