KARNATAKA
ಮೇಲಾಧಿಕಾರಿಗಳ ಕಿರುಕುಳ ತಾಳಲಾರದೆ ಬ್ಯಾಂಕ್ ಅಧಿಕಾರಿ ಆತ್ಮಹತ್ಯೆ..!
ಚಿತ್ರದುರ್ಗ: ಮೇಲಾಧಿಕಾರಿಗಳ ಕಿರುಕುಳ ತಾಳಲಾರದೇ ಬ್ಯಾಂಕ್ ಅಧಿಕಾರಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಪಟ್ಟಣದಲ್ಲಿ ನಡೆದಿದೆ.
ಸಂತೋಷ್ (36) ಆತ್ಮಹತ್ಯೆಗೆ ಶರಣಾದ ಅಧಿಕಾರಿಯಾಗಿದ್ದು ನಗರದ ಖಾಸಗಿ ಲಾಡ್ಜ್ ನಲ್ಲಿ ಸಂತೋಷ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದ್ದು ಈ ಸಂಬಂಧ ಡೆತ್ ನೋ ಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್ ನೋಟಲ್ಲಿ ಮೇಲಾಧಿಕಾರಿಗಳ ಕಿರುಕುಳ ಎಂದು ಬರೆದುಕೊಂಡಿದ್ದಾರೆ.ಮೃತ ಸಂತೋಷ್ ಮಧ್ಯ ಪ್ರದೇಶದ IDFC ಬ್ಯಾಂಕ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅಲ್ಲಿನ ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ವರ್ಗಾವಣೆ ಕೋರಿದ್ದರು. ಆದರೆ ಬ್ಯಾಂಕ್ ಅಧಿಕಾರಿಗಳು ವರ್ಗಾವಣೆಗೂ ಕೂಡಾ 2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪ ಕೇಳಿಬಂದಿದೆ. ಇದರಿಂದ ಮನನೊಂದು ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮೃತ ಸಂತೋಷ್ ಪತ್ನಿ ಲಾವಣ್ಯರಿಂದ ದೂರು ದಾಖಲಾಗಿದೆ. ಸ್ಥಳಕ್ಕೆ ಹೊಸದುರ್ಗ CPI ತಿಮ್ಮಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
You must be logged in to post a comment Login