LATEST NEWS
ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ 4.05 ಲಕ್ಷ ಹಣ ವಶ

ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ 4.05 ಲಕ್ಷ ಹಣ ವಶ
ಮಂಗಳೂರು ಎಪ್ರಿಲ್ 30: ಯಾವುದೇ ದಾಖಲೆಗಳಿಲ್ಲದೆ ಗೂಡ್ಸ್ ಟೆಂಪೋದಲ್ಲಿ ಸಾಗಿಸುತ್ತಿದ್ದ 4.05 ಲಕ್ಷ ರೂ. ನಗದು ಹಣವನ್ನು ಮೂಲ್ಕಿ ಬಪ್ಪನಾಡು ಚೆಕ್ ಪೋಸ್ಟ್ ನಲ್ಲಿ ಇಂದು ವಶಪಡಿಸಿಕೊಳ್ಳಲಾಗಿದೆ.
ಇಂದು ಚೆಕ್ ಪೋಸ್ಟ್ ನಲ್ಲಿ ತಪಾಸಣೆ ನಡೆಸುತ್ತಿದ್ದ ಚುನಾವಣಾ ಎಸ್.ಎಸ್.ಟಿ ತಂಡವು ಉಡುಪಿ ಕಡೆಯಿಂದ ಮಂಗಳೂರಿಗೆ ಮಂಡಕ್ಕಿ ಲೋಡ್ ಸಾಗಿಸುತ್ತಿದ್ದ ಗೂಡ್ಸ್ ಟೆಂಪೋ ತಪಾಸಣೆ ನಡೆಸಿದಾಗ, ಅದರಲ್ಲಿ ಸುಮಾರು 4.05 ಲಕ್ಷ ರೂ. ಹಣ ಪತ್ತೆಯಾಗಿದೆ. ಅಲ್ಲದೇ, ಇದಕ್ಕೆ ಯಾವುದೇ ದಾಖಲೆಗಳಿಲ್ಲದೇ ಇರುವುದರಿಂದ ಮೊತ್ತವನ್ನು ವಶಪಡಿಸಿಕೊಂಡಿದೆ.
