Connect with us

LATEST NEWS

ಚಲಿಸುತ್ತಿದ್ದ ಕಾರಿನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾದ ಯುವತಿ

ಚಲಿಸುತ್ತಿದ್ದ ಕಾರಿನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾದ ಯುವತಿ

ಮಂಗಳೂರು ಡಿಸೆಂಬರ್ 12:ಚಲಿಸುತ್ತಿದ್ದ ಕಾರಿನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಯುವತಿಯೊರ್ವಳು ಪತ್ತೆಯಾದ ಘಟನೆ ಮಂಗಳೂರು ಹೊರ ವಲಯದ ಸುರತ್ಕಲ್ ನ ಕುಳಾಯಿ ಎಂಬಲ್ಲಿ ನಡೆದಿದೆ.

ಯುವಕನೋರ್ವ ಚಲಾಯಿಸುತ್ತಿದ್ದ ಕಾರಿನಲ್ಲಿ ಯುವತಿಯೊರ್ವಳು ಪ್ರಜ್ಞಾ ಹೀನ ಸ್ಥಿತಿಯಲ್ಲಿರುವುದನ್ನು ವಾಹನ ಚಾಲಕರು ಗಮನಿಸಿದ್ದಾರೆ. ಅನುಮಾನಗೊಂಡು ವಾಹನ ಸವಾರರು ಕಾರನ್ನು ನಿಲ್ಲಿಸುವಂತೆ ಸನ್ನೆ ಮಾಡಿದ್ದಾರೆ ಆದರೆ ಕಾರನ್ನು ಚಲಾಯಿಸುತ್ತಿದ್ದ ಯುವಕ ಕಾರು ನಿಲ್ಲಿಸದೆ ಮುಂದಕ್ಕೆ ಹೋದಾಗ ಸ್ಥಳೀಯರು ಕಾರನ್ನು ಬೆನ್ನಟ್ಟಿ ತಡೆದು ಪ್ರಶ್ನಿಸಿದಾಗ ಯುವಕ ಪರಾರಿಯಾಗಿದ್ದಾನೆ.

ಕೂಡಲೇ ಸ್ಥಳೀಯರು ಸುರತ್ಕಲ್ ಪೊಲೀಸರಿಗೆ ಮಾಹಿತಿ ನೀಡಿದ್ದು, ಕೂಡಲೇ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ ಸುರತ್ಕಲ್ ಪೊಲೀಸರು,ಇಬ್ಬರು ಸ್ನೇಹಿತರು ಅನ್ನೊದು ಬೆಳಕಿಗೆ ಬಂದಿದೆ. ಆದರೆ ಹುಡುಗಿ ಪ್ರಜ್ಞಾಹೀನ ಸ್ಥಿತಿಯಲ್ಲಿರುವುದಕ್ಕೆ ಕಾರಣ ಇನ್ನು ತಿಳಿದು ಬಂದಿಲ್ಲ.ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Facebook Comments

comments