Connect with us

    LATEST NEWS

    ಕರಾವಳಿ ಉತ್ಸವ ಮೈದಾನದಲ್ಲಿ ಆಕರ್ಷಣೆಯ ಕೇಂದ್ರವಾದ ಮತ್ಸ್ಯಲೋಕ…!!

    ಮಂಗಳೂರು ಸೆಪ್ಟೆಂಬರ್ 30: ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ರಾಷ್ಟ್ರೀಯ ಗ್ರಾಹಕರ ಮೇಳದ ಅಂಗವಾನಿ ನಿರ್ಮಿಸಲ್ಪಟ್ಟಿರುವ ಅಂತರ್ಜಲ ಸುರಂಗ ಮಾರ್ಗ ಮೀನುಗಳ ಪ್ರದರ್ಶನವನ್ನು ಶಾಸಕ ವೇದವ್ಯಾಸ್ ಕಾಮತ್ ಉದ್ಘಾಟಿಸಿದರು.


    ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ ವೇದವ್ಯಾಸ ಕಾಮತ್ ರಿಬ್ಬನ್ ಕತ್ತರಿಸುವ ಮೂಲಕ ರಾಷ್ಟ್ರೀಯ ಗ್ರಾಹಕ ಮೇಳವನ್ನು ಉದ್ಘಾಟಿಸಿದರು. ರಾಷ್ಟ್ರೀಯ ಗ್ರಾಹಕರ ಮೇಳವು ದಕ್ಷಿಣ ಭಾರತದಾದ್ಯಂತ ಕಳೆದ ನಾಲ್ಕು ದಶಕಗಳಿಂದ ಗ್ರಾಹಕರ ಮೇಳಗಳನ್ನು ಸಂಘಟಿಸುವಲ್ಲಿ ಧ್ರುವತಾರೆಯಾಗಿ ಗುರುತಿಸಿಕೊಂಡಿರುವ ಎನ್‌ಸಿಎಫ್ (National ConsumerFair)ನಿಂದ ಸಂಘಟಿಸಲ್ಪಡುತ್ತಿದೆ. ಈ ಅಂತರ್ಜಲ ಸುರಂಗವು ಹಲವು ಪ್ರಬೇದದ ಮೀನುಗಳೊಂದಿಗೆ ಸುಂದರ ಮತ್ವ ಲೋಕವನ್ನು ಸೃಷ್ಟಿಸಿ ಮಂಗಳೂರಿನ ಜನತೆಗೆ ರಸದೌತಣವನ್ನು ನೀಡಲು ಸಜ್ಜಾಗಿವೆ.


    ಅದಷ್ಟೇ ಅಲ್ಲದೆ, ರೊಬೊಟಿಕ್ ಅನಿಮಲ್ ಶೋದಲ್ಲಿ ದೈತ್ಯಾಕಾರದ ವನಮೃಗಗಳು ಹಾಗೂ ಅವುಗಳ ಘರ್ಜನೆ ದಟ್ಟಾರಣ್ಯದಲ್ಲಿ ವಿಹರಿಸಿದ ಅನುಭವವನ್ನು ನೀಡಲಿದೆ. ಈ ಮೊದಲು ಮಂಗಳೂರಿಗೆ ಸೋವಲ್ಡ್, ಅಕ್ವಾ ಶೋ, ಬರ್ಡ್ ಶೋ, ತಾಜ್‌ಮಹಲ್‌ನಂತಹ ವಿನೂತನ ರೀತಿಯ ಮಗ ಶೋಗಳನ್ನು ನೀಡಿರುವ ಈ ಸಂಸ್ಥೆ ಪ್ರತಿ ಬಾರಿಯೂ ಹೊಚ್ಚ ಹೊಸ ಶೋಗಳನ್ನು ನೀಡುತ್ತಾ ಬಂದಿದೆ. ಈ ರಾಷ್ಟ್ರೀಯ ಗ್ರಾಹಕರ ಮೇಳವು ಸಂಪೂರ್ಣ ಕುಟುಂಬಕ್ಕಾಗಿ ಪಿಂಗ್ ಮತ್ತು ಮನರಂಜನಾ ಮೇಳವಾಗಿರುತ್ತದೆ.
    ರಾಷ್ಟ್ರೀಯ ಗ್ರಾಹಕರ ಮೇಳವು ವ್ಯಾಪಾರ ಮಳಿಗೆಗಳೊಂದಿಗೆ, ವಿಶೇಷ ಮತ್ತು ಅತ್ಯಧಿಕ ರಿಯಾಯಿತಿ ದರದಲ್ಲಿ ಗ್ರಾಹಕರನ್ನು ಆಕರ್ಷಿಸಲಿದೆ. ಗೃಹ ಬಳಕೆ ಉತ್ಪನ್ನಗಳು, ಅಡುಗೆ ಮನೆ ಉತ್ಪನ್ನಗಳು, ಕೈಮಗ್ಗದ ಉತ್ಪನ್ನಗಳು, ಕರುಶಲ, ಉತ್ಪನ್ನಗಳು, ಡ್ರೆಸ್ ಮೆಟೀರಿಯಲ್ ಫ್ಯಾರನ್ ಪಾದರಕ್ಷೆಗಳು, ಆಟಿಕೆಗಳು, ಆಹಾರೋತ್ಪನ್ನಗಳು ಮತ್ತು ಇನ್ನೂ ಹಲವಾರು ಉತ್ಪನ್ನಗಳು ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಲಭ್ಯವಾಗಲಿದೆ.


    ಮನೋರಂಜನಾ ವಿಭಾಗದಲ್ಲಿ ಟೋರಾ ಟೋರಾ, ಡ್ಯಾಶಿಂಗ್ ಕಾರ್, ಜಾಯಿಂಟ್ ಸ್ಟೀಲ್, ಡ್ರಾಗನ್ ಟೇನ್, ಮೆದ್ರಿ ಕೊಲಂಬಸ್, 30 ಶೋಸ್, ಸೇರಿ ಹೌಸ್, ಏ‌ ಶಾಟ್, ಸ್ಟೇಸ್ ಜೆಟ್, ಇತ್ಯಾದಿ ಕರಾವಳಿ ಉತ್ಸವ ಮೈದಾನ, ಮಂಗಳೂರು, 4ರಿಂದ 9ರವರೆಗೆ ಮನೋರಂಜನೆಗೆ ಅವಕಾಶವಿರುತ್ತದೆ ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಸುದೀರ್ ಶೆಟ್ಟಿ ಕಣ್ಣೂರು ಮತ್ತು ಎನ್‌ಸಿಎಫ್ (National Consumer Fair) ವತಿಯಿಂದ ಚೈತನ್ಯ ಹಾಗೂ ವಿಜಯ ಕುಮಾರ್ ಮತ್ತು ನಿಸರ್ಗ ಪಬ್ಲಿಸಿಟಿಯ ಮಂಜುನಾಥ್ ಉಪಸ್ಥಿತರಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply