Connect with us

BELTHANGADI

ಧರ್ಮಸ್ಥಳದ ಬಾಹುಬಲಿ ಬೆಟ್ಟದ ಕಾಡಿನಲ್ಲಿ‌ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಬೆಳ್ತಂಗಡಿ, ಫೆಬ್ರವರಿ 28: ಧರ್ಮಸ್ಥಳ ಗ್ರಾಮದ ಬಾಹುಬಲಿ ಬೆಟ್ಟದ ಪಕ್ಕದಲ್ಲಿರುವ ಕಾಡಿನಲ್ಲಿ‌ ಅಪರಿಚಿತ ವ್ಯಕ್ತಿಯ ಮೃತ ದೇಹ ಸುಟ್ಟ ರೀತಿಯಲ್ಲಿ ಶನಿವಾರ ಮಧ್ಯಾಹ್ನ ಪತ್ತೆಯಾಗಿದೆ.ಧರ್ಮಸ್ಥಳ ಗ್ರಾಮದ ಬಾಹುಬಲಿ ಬೆಟ್ಟ ಎಂಬಲ್ಲಿರುವ ಕಾಡಿನಲ್ಲಿ ಸುಮಾರು 35-40 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯು ಬೆಂಕಿ ಹಚ್ಚಿಕೊಂಡು ಉರಿಯುತ್ತಿದೆ ಎಂಬುದಾಗಿ ಮಾಹಿತಿ ಬಂದ ಹಿನ್ನಲೆಯಲ್ಲಿ ಸ್ಥಳೀಯರು ಪರಿಶೀಲಿಸಿದ ವೇಳೆ ಸುಟ್ಟ ಗಾಯಗಳಿಂದ ಮೃತಪಟ್ಟಿದ್ದು ಕಂಡು ಬಂದಿತ್ತು. ಸ್ಥಳೀಯರು ನೀಡಿದ ಮಾಹಿತಿಯಂತೆ ಧರ್ಮಸ್ಥಳ ಪೊಲೀಸರು ಸ್ಥಳಕ್ಕಗಮಿಸಿ, ಪರಿಶೀಲನೆ ನಡೆಸಿದ್ದಾರೆ.

ಮೃತ ವ್ಯಕ್ತಿಯು ಧರ್ಮಸ್ಥಳಕ್ಕೆ ಬಂದವರು ಯಾವುದೋ ಕಾರಣಕ್ಕಾಗಿ ಜೀವನದಲ್ಲಿ ಜಿಗುಪ್ಸೆಗೊಂಡು ದೇಹದ ಮೇಲೆ ಯಾವುದೋ ದ್ರಾವಣವನ್ನು ಮೈಮೇಲೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ಶಂಕಸಲಾಗಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.