LATEST NEWS
ಕೇಂದ್ರ ಸಚಿವ ಅನಂತ್ ಕುಮಾರ್ ನಿಧನ ಹಿನ್ನಲೆ ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು ರಜೆ

ಕೇಂದ್ರ ಸಚಿವ ಅನಂತ್ ಕುಮಾರ್ ನಿಧನ ಹಿನ್ನಲೆ ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು ರಜೆ
ಬೆಂಗಳೂರು ನವೆಂಬರ್ 12 ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಎಚ್.ಎನ್. ಅನಂತಕುಮಾರ್ ನಿಧನ ಹಿನ್ನಲೆಯಲ್ಲಿ ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ರಾಜ್ಯ ಸರಕಾರ ಆದೇಶಿಸಿದೆ.
ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅನಂತಕುಮಾರ್ ಅವರು ಸೋಮವಾರ ನಸುಕಿನ ಜಾವ ಎರಡು ಗಂಟೆ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಇತ್ತೀಚೆಗೆ ತೀವ್ರ ಅನಾರೋಗ್ಯ ಪೀಡಿತರಾಗಿದ್ದ ಅನಂತಕುಮಾರ್ ಅವರನ್ನು ಕಳೆದ ಎರಡು ದಿನಗಳಿಂದ ವೆಂಟಿಲೇಟರ್‍ನಲ್ಲಿ ಇಡಲಾಗಿತ್ತು. ಅನಂತಕುಮಾರ್ ಅವರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಈ ಹಿನ್ನಲೆಯಲ್ಲಿ ಇಂದು ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ರಾಜ್ಯ ಸರಕಾರ ಆದೇಶಿಸಿದ್ದಪ, ರಾಜ್ಯದಾದ್ಯಂತ ಇಂದಿನಿಂದ 3 ದಿನ ಶೋಕಾಚರಣೆ ನಡೆಸಲಾಗುವುದು.