Connect with us

    LATEST NEWS

    ಕೇಂದ್ರ ಸಚಿವ ಅನಂತ್ ಕುಮಾರ್ ನಿಧನ

    ಕೇಂದ್ರ ಸಚಿವ ಅನಂತ್ ಕುಮಾರ್ ನಿಧನ

    ಬೆಂಗಳೂರು ನವೆಂಬರ್ 12 ಬಿಜೆಪಿ ಪ್ರಮುಖ ನಾಯಕ ಹಿರಿಯ ಮುಖಂಡ ಹಾಗೂ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಎಚ್.ಎನ್. ಅನಂತಕುಮಾರ್ ಇಂದು ನಿಧನರಾಗಿದ್ದಾರೆ.

    ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅನಂತಕುಮಾರ್ ಅವರು ಸೋಮವಾರ ನಸುಕಿನ ಜಾವ ಎರಡು ಗಂಟೆ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

    ಇತ್ತೀಚೆಗೆ ತೀವ್ರ ಅನಾರೋಗ್ಯ ಪೀಡಿತರಾಗಿದ್ದ ಅನಂತಕುಮಾರ್ ಅವರನ್ನು ಕಳೆದ ಎರಡು ದಿನಗಳಿಂದ ವೆಂಟಿಲೇಟರ್‍ನಲ್ಲಿ ಇಡಲಾಗಿತ್ತು. ಅನಂತಕುಮಾರ್ ಅವರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

    ಇಂದು ಬೆಳಗ್ಗೆ ಪ್ರಧಾನಿ ಮೋದಿ ಬೆಂಗಳೂರಿಗೆ ಬರಲಿದ್ದಾರೆ. ಬೆಳಗ್ಗೆ 9 ಗಂಟೆಯ ನಂತರ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು.

    ಕೇಂದ್ರ ಸಚಿವ ಅನಂತ್ ಕುಮಾರ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಕಂಬನಿ ಮಿಡಿದಿದ್ದಾರೆ.

    Video…

    Share Information
    Advertisement
    Click to comment

    You must be logged in to post a comment Login

    Leave a Reply