KARNATAKA
ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡರಿಗೆ ಕೊರೊನಾ ಸೊಂಕು
ಬೆಂಗಳೂರು ನವೆಂಬರ್ 19: ಕೇಂದ್ರ ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದ ಗೌಡರಿಗೆ ಕರೊನಾ ಸೋಂಕು ತಗುಲಿದೆ. ಈ ಕುರಿತಂತೆ ಸ್ವತಃ ಸದಾನಂದ ಗೌಡರೇ ಟ್ವಿಟರ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಕೊರೊನಾ ರೋಗದ ಲಕ್ಷಣ ಕಂಡುಬಂದ ಹಿನ್ನೆಲೆಯಲ್ಲಿ ಕೊರೊನಾ ಪರೀಕ್ಷೆಗೆ ಒಳಪಟ್ಟಿದ್ದೆ. ವರದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಹಾಗಾಗಿ ಐಸೋಲೇಶನ್ಗೆ ಒಳಪಟ್ಟಿದ್ದೇನೆ ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.
ಕೇಂದ್ರ ಸಚಿವ ಸದಾನಂದ ಗೌಡರು ಶೀಘ್ರ ಕೊರೊನಾದಿಂದ ಗುಣಮುಖರಾಗಲಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸಹಿತ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಟ್ವೀಟ್ ಮೂಲಕ ಹಾರೈಸಿದ್ದಾರೆ.