Connect with us

KARNATAKA

ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡರಿಗೆ ಕೊರೊನಾ ಸೊಂಕು

ಬೆಂಗಳೂರು ನವೆಂಬರ್ 19: ಕೇಂದ್ರ ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದ ಗೌಡರಿಗೆ ಕರೊನಾ ಸೋಂಕು ತಗುಲಿದೆ. ಈ ಕುರಿತಂತೆ ಸ್ವತಃ ಸದಾನಂದ ಗೌಡರೇ ಟ್ವಿಟರ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.


ಕೊರೊನಾ ರೋಗದ​ ಲಕ್ಷಣ ಕಂಡುಬಂದ ಹಿನ್ನೆಲೆಯಲ್ಲಿ ಕೊರೊನಾ ಪರೀಕ್ಷೆಗೆ ಒಳಪಟ್ಟಿದ್ದೆ. ವರದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಹಾಗಾಗಿ ಐಸೋಲೇಶನ್​ಗೆ ಒಳಪಟ್ಟಿದ್ದೇನೆ ಎಂದು ಸಚಿವರು ಟ್ವೀಟ್​ ಮಾಡಿದ್ದಾರೆ.


ಕೇಂದ್ರ ಸಚಿವ ಸದಾನಂದ ಗೌಡರು ಶೀಘ್ರ ಕೊರೊನಾದಿಂದ ಗುಣಮುಖರಾಗಲಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸಹಿತ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಟ್ವೀಟ್ ಮೂಲಕ ಹಾರೈಸಿದ್ದಾರೆ.