Connect with us

LATEST NEWS

ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ನಿಧನ

ನವದೆಹಲಿ ಸೆಪ್ಟೆಂಬರ್ 23: ಕೇಂದ್ರ ರೈಲ್ವೇ ಖಾತೆಯ ರಾಜ್ಯ ಸಚಿವ ಸುರೇಶ್ ಅಂಗಡಿ ಅವರು ಇಂದು ನಿಧನ ಹೊಂದಿದ್ದಾರೆ.


ಬೆಳಗಾವಿಯ ಸಂಸದರು ಹಾಗೂ ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವರಾಗಿರುವ ಸುರೇಶ್ ಅಂಗಡಿ ಅವರು ದೆಹಲಿಯ ಎಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕೊರೊನಾ ಹಿನ್ನಲೆ ನವದೆಹಲಿಯ ಎಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ. ಇದರೊಂದಿಗೆ ಕರ್ನಾಟಕದ ಇಬ್ಬರು ಜನಪ್ರತಿನಿಧಿಗಳು ಕೊರೊನಾಗೆ ಬಲಿಯಾಗಿದ್ದಾರೆ. ಅವರಿಗೆ ಸೆಪ್ಟೆಂಬರ್ 11ರಂದು  ಕೋವಿಡ್–19 ದೃಢ‍ಪಟ್ಟಿತ್ತು. ಫೇಸ್‌ಬುಕ್‌ ಹಾಗೂ ಟ್ವಿಟರ್ ಖಾತೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದರು.

ಬಿ.ಕಾಂ, ಎಲ್ಎಲ್‌ಬಿ ಓದಿದ್ದ ಸುರೇಶ ಅಂಗಡಿ ಅವರು 2004ರಿಂದ ಸತತ ನಾಲ್ಕು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಲಿಂಗಾಯತ– ಬಣಜಿಗ ಸಮುದಾಯಕ್ಕೆ ಸೇರಿದ್ದರು. ಯುವಕರಾಗಿದ್ದಾಗಲೇ ಬಿಜೆಪಿಗೆ ಸೇರ್ಪಡೆಯಾಗಿ, ಜಿಲ್ಲಾ ಘಟಕದ ಅಧ್ಯಕ್ಷ ಸೇರಿದಂತೆ ವಿವಿಧ ಸ್ಥಾನಗಳಲ್ಲಿ ಕಾರ್ಯನಿರ್ವಹಿಸಿದ್ದರು. ಜತೆಗೆ ಸಿಮೆಂಟ್‌ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದರು.ಪತ್ನಿ ಮಂಗಳಾ, ಪುತ್ರಿಯರಾದ ಸ್ಫೂರ್ತಿ ಹಾಗೂ ಶ್ರದ್ಧಾ ಇದ್ದಾರೆ. ಮಗಳು ಶ್ರದ್ಧಾ ಅವರ ವಿವಾಹವನ್ನು ಶಾಸಕ, ಜಗದೀಶ ಶೆಟ್ಟರ್‌ ಅವರ ಪುತ್ರನೊಂದಿಗೆ ನೆರವೇರಿಸಿದ್ದರು.

Facebook Comments

comments